ರೈತರ ಸರ್ವತೋಮುಖ ಅಭಿವೃದ್ಧಿಗಾಗಿ ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಶ್ರಮ: ಅಧ್ಯಕ್ಷ ಎ.ಕೆ.ಮನು ಮುತ್ತಪ್ಪ
ಮಡಿಕೇರಿ: ರೈತರ ಸರ್ವತೋಮುಖ ಅಭಿವೃದ್ಧಿಗಾಗಿ ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಒತ್ತು ನೀಡಿದೆ ಎಂದು ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಎ.ಕೆ.ಮನು ಮುತ್ತಪ್ಪ ಹೇಳಿದರು. ನಗರದ ಯೂನಿಯನ್ ಸಭಾಂಗಣದಲ್ಲಿ ನಡೆದ ಕೊಡಗು ಜಿಲ್ಲಾ ಸಹಕಾರ ಯೂನಿಯನ್‌ನ ೨೦೨೪-೨೫ನೇ ಸಾಲಿನ ಹಾಗೂ ೫೮ನೇ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಯೂನಿಯನ್‌ನ ಮುಖ್ಯ ಉದ್ದೇಶ, ಸಹಕಾರ ಶಿಕ್ಷಣ, ತರಬೇತಿ, ಪ್ರಚಾರವಾಗಿದೆ. ಈ ಕಾರ್ಯಕ್ರಮಗಳನ್ನು ಮಹಾಮಂಡಳದ ಮಾರ್ಗದರ್ಶನದ ಮೂಲಕ ಜಿಲ್ಲೆಯ ವಿವಿಧ ವಲಯಗಳಿಗೆ ಆಯೋಜಿಸುವುದಾಗಿದೆ. ವಿಶೇಷವಾಗಿ ಅಬಲವರ್ಗದ ಸಹಕಾರ ಸಂಘ ಅಂದರೆ ಪರಿಶಿಷ್ಟ ಜಾತಿ/ವರ್ಗ, ಮಹಿಳೆಯರಿಗೆ ತಪ್ಪದೆ ಶಿಕ್ಷಣ ಕಾರ್ಯಕ್ರಮವನ್ನು ಆಯೋಜಿಸುತ್ತಿದೆ. ಸಹಕಾರ ಕ್ಷೇತ್ರಕ್ಕೆ ಆಯ್ಕೆಯಾದ ನಿರ್ದೇಶಕರು ಶಿಕ್ಷಣ, ತರಬೇತಿ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಸಂಬಂಧಿಸಿದ ಜ್ಞಾನವನ್ನು ಪಡೆಯುವುದಷ್ಟೇ ಅಲ್ಲದೆ ಅರಿತ ವಿಚಾರವನ್ನು ಕಾರ್ಯಗತಗೊಳಿಸಬೇಕು. ಹಾಗಿದ್ದಲ್ಲಿ ಸಂಸ್ಥೆಯು ಉತ್ತಮ ಹಿಡಿತದೊಂದಿಗೆ ಅಭಿವೃದ್ಧಿ ಪಥದಲ್ಲಿ ಸಾಗುತ್ತದೆ ಎಂದು ಸಲಹೆ ನೀಡಿದರು. ಸಭೆಯಲ್ಲಿ ಯೂನಿಯನ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯೋಗೇಂದ್ರ ನಾಯಕ್, ಉಪಾಧ್ಯಕ್ಷ ಪಿ.ಸಿ.ಮನು ರಾಮಚಂದ್ರ, ನಿರ್ದೇಶಕರಾದ ಕೆ.ಎಂ.ತಮ್ಮಯ್ಯ, ಬಿ.ಎ.ರಮೇಶ್ ಚಂಗಪ್ಪ, ಎನ್.ಎ.ರವಿ ಬಸಪ್ಪ, ಸಿ.ಎಸ್.ಕೃಷ್ಣ ಗಣಪತಿ, ಎನ್.ಎ.ಉಮೇಶ್ ಉತ್ತಪ್ಪ, ಪಿ.ಸಿ.ಅಚ್ಚಯ್ಯ, ಪಿ.ಬಿ.ಯತೀಶ್, ಎ.ಎಸ್.ಶ್ಯಾಮ್‌ಚಂದ್ರ, ಎನ್.ಎ.ಮಾದಯ್ಯ, ಎಚ್.ಎಂ.ರಮೇಶ್, ಯೂನಿಯನ್ ವ್ಯವಸ್ಥಾಪಕಿ ಆರ್.ಮಂಜುಳ ಸೇರಿದಂತೆ ಜಿಲ್ಲೆಯ ವಿವಿಧೆಡೆಯಿಂದ ಯೂನಿಯನ್‌ನ ಸದಸ್ಯರು ಪಾಲ್ಗೊಂಡಿದ್ದರು.