Kodagu

ಏಪ್ರಿಲ್ 29, 30 ರಂದು ಸುಂಟಿಕೊಪ್ಪದಲ್ಲಿ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ

admincoorgdaily

ಏಪ್ರಿಲ್ 29, 30 ರಂದು ಸುಂಟಿಕೊಪ್ಪದಲ್ಲಿ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ

ಚೆಟ್ಟಳ್ಳಿ;ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಏಪ್ರಿಲ್ 29 ಮತ್ತು 30 ರಂದು ಸುಂಟಿಕೊಪ್ಪ ಜಿ. ಎಂ.ಪಿ. ಶಾಲಾ ಮೈದಾನದಲ್ಲಿ ಜಿಲ್ಲಾ ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ.

ಇಂದು ಸುಂಟಿಕೊಪ್ಪ ಕೊಡವ ಸಮಾಜದಲ್ಲಿ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಕೇಶವ್ ಕಾಮತ್ ಅವರ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಸಭೆಯಲ್ಲಿ ಸಾಹಿತ್ಯ ಸಮ್ಮೇಳನದ ಯಶಸ್ವಿಗಾಗಿ ವಿವಿಧ ಉಪಸಮಿತಿಗಳನ್ನು ರಚಿಸಲಾಯಿತು.

ವೇದಿಕೆಯಲ್ಲಿ ಜಿಲ್ಲಾಡಳಿತದ ಕಾನೂನು ಸಲಹೆಗಾರರಾದ ಎ. ಲೋಕೇಶ್ ಕುಮಾರ್, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷರಾದ ಟಿ.ಪಿ. ರಮೇಶ್, ಸುಂಟಿಕೊಪ್ಪ ಹೋಬಳಿ ಕ.ಸಾ.ಪ. ಅಧ್ಯಕ್ಷರಾದ ಪಿ.ಎಫ್. ಸಬಾಸ್ಟೀನ್ ಹಾಗೂ ಇತರರು ಉಪಸ್ಥಿತರಿದ್ದರು.