ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಪೂರ್ವಭಾವಿ ಸಭೆ
ಮಡಿಕೇರಿ: ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಪೂರ್ವಭಾವಿ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಎನ್.ಎಸ್ ಭೋಸರಾಜು ರವರೊಂದಿಗೆ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು ಭಾಗವಹಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಅಧಿಕಾರಿ ವೆಂಕಟ್ ರಾಜ್, ಜಿಲ್ಲಾ ಪಂ ಸಿಇಓ ಆನಂದ್ ಪ್ರಕಾಶ್ ಮೀನಾ, ಜಿಲ್ಲಾ ವರಿಷ್ಠ ಅಧಿಕಾರಿ ರಾಮರಾಜನ್, ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಕೇಶವ್ ಕಮತ್, ಮಾಜಿ ಅಧ್ಯಕ್ಷರು ಟಿ ಪಿ ರಮೇಶ್, ತಾಲೂಕು ಅಧ್ಯಕ್ಷರು ರಾಜೇಶ್ ಪದ್ಮನಾಭ, ಪದಾಧಿಕಾರಿಗಳು ಹಾಗೂ ಪ್ರಮುಖರು ಉಪಸ್ಥಿತರಿದ್ದರು.
