ಏ.18, ಮತ್ತು 19 ರಂದು ತಿತಿಮತಿಯಲ್ಲಿ ಕೊಡಗು ಜಿಲ್ಲಾ ಮಟ್ಟದ ರೋಮನ್ ಕ್ಯಾಥೋಲಿಕ್ ಕ್ರೀಡೋತ್ಸವ

ಏ.18, ಮತ್ತು 19 ರಂದು ತಿತಿಮತಿಯಲ್ಲಿ ಕೊಡಗು ಜಿಲ್ಲಾ ಮಟ್ಟದ ರೋಮನ್ ಕ್ಯಾಥೋಲಿಕ್ ಕ್ರೀಡೋತ್ಸವ

ಮಡಿಕೇರಿ: ಕೊಡಗು ಜಿಲ್ಲಾ ರೋಮನ್ ಕ್ಯಾಥೋಲಿಕ್ ಅಸೋಸಿಯೇಷನ್, ಲೂರ್ದು ಮಾತೆ ದೇವಾಲಯ ಪಾಲಿಬೆಟ್ಟ ಮತ್ತು ಫಾತಿಮಾ ಮಾತೆ ದೇವಾಲಯ ತಿತಿಮತಿ ಸಂಯುಕ್ತಾಶ್ರಯದಲ್ಲಿ 15ನೇ ವರ್ಷದ ಕೊಡಗು ಜಿಲ್ಲಾ ಮಟ್ಟದ ರೋಮನ್ ಕ್ಯಾಥೋಲಿಕ್ ಕ್ರೀಡೋತ್ಸವ ಏ.18, 19 ರಂದು ಪೊನ್ನಂಪೇಟೆ ತಾಲೂಕಿನ ತಿತಿಮತಿ ಗ್ರಾಮದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲಾ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕೊಡಗು ಜಿಲ್ಲಾ ರೋಮನ್ ಕ್ಯಾಥೋಲಿಕ್ ಅಸೋಸಿಯೇಷನ್ ಜಾನ್ಸನ್ ಪಿಂಟೋ ತಿಳಿಸಿದ್ದಾರೆ.

ಅಂದು ಬೆಳಗ್ಗೆ 11 ಗಂಟೆಗೆ ಮೈಸೂರು ಧರ್ಮಕ್ಷೇತ್ರದ ಧರ್ಮಾಧ್ಯಕ್ಷರಾದ ಡಾ.ಪ್ರಾನ್ಸೀಸ್ ಸೆರಾವೋ ಎಸ್.ಜೆ ಅವರು ದಿವ್ಯ ಸಾನಿಧ್ಯ ವಹಿಸಿ ಆಶೀರ್ವಚನ ನೀಡಲಿದ್ದಾರೆ. ಸಭಾ ಕಾರ್ಯಕ್ರಮದ ಉದ್ಘಾಟನೆಯನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಮತ್ತು ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ನೆರವೇರಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಾನು ವಹಿಸಲಿದ್ದು, ಕಾರ್ಯಕ್ರಮದ ಧ್ವಜಾರೋಹಣವನ್ನು ಪಾಲಿಬೆಟ್ಟ ಲೂರ್ದು ಮಾತೆ ದೇವಾಲಯದ ಧರ್ಮಗುರು ಫಾ.ಮರಿಯಾ ರಾಜ್ ಜಾರ್ಜ್ ನೆರವೇರಿಸಲಿದ್ದಾರೆ. ಕ್ರೀಡಾಕೂಟದ ಉದ್ಘಾಟನೆಯನ್ನು ಪ್ರಮುಖರಾದ ಸಿಬಿ ಪೌಲ್, ಚೆಪ್ಪುಡೀರ ಕಾರ್ಯಪ್ಪ ಅವರು ನಡೆಸಿಕೊಡಲಿದ್ದಾರೆ.

ಏ.19ರಂದು ಸಂಜೆ 4.30ಕ್ಕೆ ರೋಮನ್ ಕ್ಯಾಥೋಲಿಕ್ ಅಸೋಶಿಯೇಷನ್ ಪೊನ್ನಂಪೇಟೆ ತಾಲೂಕು ಅಧ್ಯಕ್ಷ ಸುಭಾಶ್ ಮ್ಯಾಥ್ಯೂ ಅಧ್ಯಕ್ಷತೆಯಲ್ಲಿ ಸಮಾರೋಪ ಸಮಾರಂಭ ನಡೆಯಲಿದೆ. ಮಡಿಕೇರಿ ಶಾಸಕ ಮಂತರ್ ಗೌಡ, ದಕ್ಷಿಣ ಕನ್ನಡ ಮತ್ತು ಕರಾವಳಿ ಜಿಲ್ಲಾ ಕ್ರೈಸ್ತ ಸಂಘಗಳ ಒಕ್ಕೂಟದ ಅಧ್ಯಕ್ಷ ಗ್ರೇಶಿಯನ್ ರೋಡ್ರಿಗಸ್ ಸೇರಿದಂತೆ ಗಣ್ಯರು ಪಾಲ್ಗೊಳ್ಳಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ಸಮಾಜಬಾಂಧವರಿಗೆ ಕ್ರಿಕೆಟ್, ಥ್ರೋಬಾಲ್ ಹಾಗೂ ಮಹಿಳೆಯರಿಗೆ ಮತ್ತು ಪುರುಷರಿಗೆ ಪ್ರತ್ಯೇಕ ವಿಭಾಗದಲ್ಲಿ ಹಗ್ಗಜಗ್ಗಾಟ ನಡೆಯಲಿದೆ ಎಂದು ವಿವರಿಸಿದರು.

ಸುದ್ದಿಗೋಷ್ಠಿಯಲ್ಲಿ ಕೊಡಗು ಜಿಲ್ಲಾ ರೋಮನ್ ಕ್ಯಾಥೋಲಿಕ್ ಅಸೋಸಿಯೇಷನ್ ಗೌರವಾಧ್ಯಕ್ಷ ಜೋಕಿಂ ವಾಸ್, ಪ್ರಮುಖರಾದ ಲಾರೆನ್ಸ್, ಡೆನ್ಸಿಲ್ ವರ್ಗೀಸ್, ಜೋಕಿಂ ರೋಡ್ರಿಗಸ್, ಶಾಲಮ್ ಇದ್ದರು.