Kodagu

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧ ದನಿಯೆತ್ತಿದ ವಿದ್ಯಾರ್ಥಿಗಳ ಮೇಲೆ ನಡೆದ ಹಲ್ಲೆ ಖಂಡಿಸಿ ಎಸ್‌ಡಿಪಿಐ ವತಿಯಿಂದ ಪ್ರತಿಭಟನೆ

admincoorgdaily

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧ ದನಿಯೆತ್ತಿದ ವಿದ್ಯಾರ್ಥಿಗಳ ಮೇಲೆ ನಡೆದ ಹಲ್ಲೆ ಖಂಡಿಸಿ ಎಸ್‌ಡಿಪಿಐ ವತಿಯಿಂದ ಪ್ರತಿಭಟನೆ

ಮಡಿಕೇರಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧ ದನಿಯೆತ್ತಿದ ವಿದ್ಯಾರ್ಥಿಗಳ ಮೇಲೆ ನಡೆದ ಹಲ್ಲೆಯನ್ನು ಖಂಡಿಸಿ ಕೊಡಗು ಜಿಲ್ಲಾ ಎಸ್‌ಡಿಪಿಐ ವತಿಯಿಂದ ಶುಕ್ರವಾರ ಮಡಿಕೇರಿಯಲ್ಲಿ ಪ್ರತಿಭಟನಾ ರ್‍ಯಾಲಿ ನಡೆಯಿತು. ಇಂದಿರಾಗಾಂಧಿ ವೃತ್ತದಲ್ಲಿ ಜಮಾಯಿಸಿದ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಕಾರ್ಯಕರ್ತರು ಕೇಂದ್ರದ ಬಿಜೆಪಿ ಸರ್ಕಾರ, ಆರ್.ಎಸ್.ಎಸ್ ಮತ್ತು ಬಿಜೆಪಿ ನಾಯಕರ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಪಕ್ಷದ ಜಿಲ್ಲಾಧ್ಯಕ್ಷ ಅಮೀನ್ ಮೊಹಿಸಿನ್ ಮಾತನಾಡಿ, ಜಾತಿ ಭೇದ ಮರೆತು ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಗೆ ಇಡೀ ದೇಶದ ಯುವ ಸಮುದಾಯ ಬೆಂಬಲ ನೀಡಿದ್ದು ಬಿಜೆಪಿಯಲ್ಲಿ ಆತಂಕ ಮೂಡಿಸಿದೆ. ಯುವಜನರ ಭವಿಷ್ಯವನ್ನು ಕಸಿದುಕೊಳ್ಳಲು ನಡೆಯುತ್ತಿರುವ ಈ ದಬ್ಬಾಳಿಕೆಯನ್ನು ಎಸ್‌ಡಿಪಿಐ ತೀವ್ರ ಹೋರಾಟದ ಮೂಲಕ ಎದುರಿಸಲಿದೆ ಎಂದು ಹೇಳಿದರು. ಪ್ರತಿಭಟನೆಯಲ್ಲಿ ಮನ್ಸೂರ್, ಅಬ್ದುಲ್ಲಾ ಅಡ್ಕಾರ್, ಮೇರಿ ವೇಗಸ್, ರಜಾಕ್ ಸೇರಿದಂತೆ ಹಲವರು ಭಾಗವಹಿಸಿದ್ದರು.