ಕೊಡಗು ಜಿಲ್ಲಾ ವಖ್ಫ್ ಮಂಡಳಿ ಅಧ್ಯಕ್ಷರ ನೇಮಕ ವಿಚಾರ :ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದಿಂದ ಮಹತ್ವದ ಸಭೆ
ಮಡಿಕೇರಿ: ಶೀಘ್ರದಲ್ಲೇ ತೆರವಾಗಲಿರುವ ಕೊಡಗು ಜಿಲ್ಲಾ ವಖ್ಫ್ ಸಲಹಾ ಮಂಡಳಿ ಅಧ್ಯಕ್ಷರ ನೇಮಕ ವಿಚಾರ ಇದೀಗ ದಿನೇ ದಿನೇ ಬಿರುಸುಕೊಳ್ಳುತ್ತಿದೆ. ಮಂಡಳಿಯ ಅಧ್ಯಕ್ಷ ಸ್ಥಾನಕ್ಕೆ ಆಕಾಂಕ್ಷಿಗಳ ಪಟ್ಟಿ ಹೆಚ್ಚುತ್ತಿರುವುದರಿಂದ ಪಕ್ಷದ ಹೈಕಮಾಂಡಿಗೆ ಈ ಕುರಿತು ಅಂತಿಮ ತೀರ್ಮಾನ ತೆಗೆದುಕೊಳ್ಳಲು ಸಾಧ್ಯವಾಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ಆಡಳಿತ ಪಕ್ಷದ ಜಿಲ್ಲೆಯ ಇಬ್ಬರು ಶಾಸಕರ ನಿರ್ದೇಶನದಂತೆ ಕೊಡಗು ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ವತಿಯಿಂದ ಮಹತ್ವದ ಸಭೆ ಆಯೋಜಿಸಲಾಗಿತ್ತು.
ಘಟಕದ ಅಧ್ಯಕ್ಷರಾದ ಪಿ. ಎ. ಹನೀಫ್ ಅವರ ಅಧ್ಯಕ್ಷತೆಯಲ್ಲಿ ಮಡಿಕೇರಿಯ ಹೊರವಲಯದಲ್ಲಿರುವ ರೆಸಾರ್ಟ್ ನಲ್ಲಿ ನಡೆದ ಸಭೆಯಲ್ಲಿ ಈ ಕುರಿತು ದೀರ್ಘವಾಗಿ ಚರ್ಚಿಸಿ ಇಬ್ಬರು ಆಕಾಂಕ್ಷಿಗಳ ಪಟ್ಟಿಯನ್ನು ಶೀಘ್ರದಲ್ಲೇ ಶಾಸಕರಿಗೆ ಸಲ್ಲಿಸುವಂತೆ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗಿದೆ. ಅಧ್ಯಕ್ಷ ಸ್ಥಾನಕ್ಕಾಗಿ ತೀವ್ರ ಪೈಪೋಟಿ ನಡೆಸುತ್ತಿರುವ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಮಹಮದ್ ಹಾಜಿ ಕುಂಜಿಲ ಮತ್ತು ಮಡಿಕೇರಿ ವಿಧಾನಸಭಾ ಕ್ಷೇತ್ರದ ಖಲೀಲ್ ಬಾಷ ಅವರ ಹೆಸರನ್ನು ಪಕ್ಷದ ಹೈಕಮಾಂಡ್ ಗೆ ಸಲ್ಲಿಸುವಂತೆಯೂ, ಈ ಕುರಿತು ಅಂತಿಮವಾಗಿ ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧರಾಗಿರುವಂತೆಯೂ ಸಭೆಯಲ್ಲಿ ಒಮ್ಮತದಿಂದ ತೀರ್ಮಾನಿಸಲಾಯಿತು.
ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎಚ್ ಎ ಹಂಸ, ಸೋಮವಾರಪೇಟೆ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಕೆ.ಎ. ಆದಮ್, ಕೊಡಗು ಜಿಲ್ಲಾ ಕಾಂಗ್ರೆಸ್ (ಡಿ.ಸಿ. ಸಿ.) ಪ್ರಧಾನ ಕಾರ್ಯದರ್ಶಿಗಳಾದ ಅಬ್ದುಲ್ ರಹಿಮಾನ್ (ಬಾಪು ), ಜಿಲ್ಲಾ ವಖ್ಫ್ ಸಲಹಾ ಸಮಿತಿ ಮಾಜಿ ಅಧ್ಯಕ್ಷರಾದ ಹಮೀದ್ ಕಬಡಗೇರಿ, ಪೊನ್ನಂಪೇಟೆ ಪಟ್ಟಣ ಪಂಚಾಯಿತಿ ಉಪಾಧ್ಯಕ್ಷರಾದ ಆಲೀರ ಎಂ. ರಶೀದ್, ನೆಲ್ಯಹುದಿಕೇರಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರಾದ ಎ.ಕೆ. ಹಕೀಂ, ಡಿಸಿಸಿ ಸದಸ್ಯರಾದ ಅಬ್ದುಲ್ ರಹಿಮಾನ್ (ಅಂದಾಯಿ) ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರಾದ ಮೊಯ್ದಿನ್ ಕುಂಜ್ಹಿ, ಕೊಡಗು ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಉಪಾಧ್ಯಕ್ಷರಾದ ಎಂ.ಎಂ ಇಸ್ಮಾಯಿಲ್, ಪಿಎಂ ಹನೀಫ್, ಪ್ರಧಾನ ಕಾರ್ಯದರ್ಶಿ ಕೆ.ಎಂ. ಸಯ್ಯದ್ ಭಾವ, ಸಂಘಟನಾ ಕಾರ್ಯದರ್ಶಿ ಕುಂಡಂಡ ಎ. ರಜಾಕ್, ಜಿಲ್ಲಾ ಸಮಿತಿ ಸದಸ್ಯರಾದ ಹನೀಫ್ ಕಾರೆಕಾಡು, ಎಂ.ಎ. ಮುನೀರ್, ಚೇಕು, ಜಿಲ್ಲೆಯ ವಿವಿಧ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರುಗಳಾದ ಕೋಳುಮಂಡ ರಫೀಕ್, ಅಕ್ಮಲ್ ಪಾಷ, ಅಬ್ದುಲ್ ರಜಾಕ್, ಸಿ.ಎ. ಜುನೈದ್, ಉಮ್ಮರ್ ಹಾಜಿ, ಎನ್.ಎಸ್.ಯು.ಐ. ಜಿಲ್ಲಾ ಸಮಿತಿ ಅಧ್ಯಕ್ಷರಾದ ರಾಶಿದ್ ಅಯ್ಯಂಗೇರಿ, ಮಡಿಕೇರಿ ನಗರ ಕಾಂಗ್ರೆಸ್ ನ ಮಾಜಿ ಅಧ್ಯಕ್ಷರಾದ ಕೆ. ಯು. ಅಬ್ದುಲ್ ರಜಾಕ್, ವಿರಾಜಪೇಟೆ ಪುರಸಭೆಯ ಸ್ಥಾಯಿ ಸಮಿತಿಯ ಅಧ್ಯಕ್ಷರಾದ ಜಲೀಲ್, ಪೊನ್ನಂಪೇಟೆ ತಾಲೂಕು ಕೆಡಿಪಿ ಸದಸ್ಯರಾದ ಅಬ್ದುಲ್ ಸಮ್ಮದ್, ವಿವಿಧ ಗ್ರಾಮ ಪಂಚಾಯಿತಿ ಸದಸ್ಯರಾದ ರಜಾಕ್, ಹನೀಫ್ ಮಾಲ್ದಾರೆ, ಇಸ್ಮಾಯಿಲ್ ಮಾಲ್ದಾರೆ, ಮಡಿಕೇರಿ ನಗರ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರಾದ ಕೌಸರ್, ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಕಾರ್ಯದರ್ಶಿ ಎಂ.ಯು. ಮೊಹಮ್ಮದ್, ಮುಖಂಡರಾದ ಮೊಹಮ್ಮದ್ ಮಾಮುಚ್ಚ, ವಕೀಲ ಎಂ.ಎ. ಸಮೀರ್, ಮೊಯ್ದು ಹಾಜಿ ಬೆಟ್ಟಗೇರಿ, ನಾಸರ್ ಪಾಲಿಬೆಟ್ಟ, ಹನೀಫ್ ವಾಲ್ನೂರು, ಡಿ.ಕೆ. ಶಿವಕುಮಾರ್ ಅಭಿಮಾನಿ ಬಳಗದ ಜಿಲ್ಲಾಧ್ಯಕ್ಷರಾದ ನವೀದ್ ಖಾನ್, ಜಿಲ್ಲಾ ವಖ್ಫ್ ಸಲಹಾ ಮಂಡಳಿ ಅಧ್ಯಕ್ಷ ಸ್ಥಾನದ ಆಕಾಂಕ್ಷಿಗಳಾದ ಮಹಮ್ಮದ್ ಹಾಜಿ ಕುಂಜಿಲ ಮತ್ತು ಖಲೀಲ್ ಬಾಷಾ ಮಡಿಕೇರಿ ಸೇರಿದಂತೆ ಅಲ್ಪಸಂಖ್ಯಾತ ಕಾಂಗ್ರೆಸ್ ಮುಖಂಡರು ಹಾಗೂ ವಿವಿಧ ಘಟಕದ ಪದಾಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.