ಬೆಳಗಾವಿಗೆ ವರ್ಗಾವಣೆಗೊಂಡ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್ ಅವರಿಗೆ ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಬೀಳ್ಕೊಡುಗೆ
admincoorgdaily

ಮಡಿಕೇರಿ:ಬೆಳಗಾವಿಗೆ ವರ್ಗಾವಣೆಗೊಂಡ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್ ಅವರನ್ನು ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಸನ್ಮಾನಿಸಿ ಬೀಳ್ಕೊಡಲಾಯಿತು.
ಈ ಸಂದರ್ಭ ಕೊಡಗಿನ ಪತ್ರಕರ್ತರ ಬದ್ಧತೆಯನ್ನು ಶ್ಲಾಘಿಸಿದ ರಾಮರಾಜನ್ ಅವರು, ಸ್ಥಳೀಯ ಪತ್ರಕರ್ತರು ಜಿಲ್ಲಾ ಪೊಲೀಸ್ ಇಲಾಖೆಗೆ ಸಂಪೂರ್ಣ ಸಹಕಾರ ನೀಡಿದ್ದಾರೆ. ತಪ್ಪುಗಳನ್ನು ತಿದ್ದುವ ಕೆಲಸ ಮಾಡಿದ್ದಾರೆ. ಕಾನೂನು, ಸುವ್ಯವಸ್ಥೆ ಪಾಲನೆ ಕಾಪಾಡುವ ನಿಟ್ಟಿನಲ್ಲಿ ಸುದ್ದಿಗಳ ಮೂಲಕ ಜನರಲ್ಲಿ ಅರಿವು ಮೂಡಿಸಿದ್ದಾರೆ. ಪತ್ರಕರ್ತರೊಂದಿಗಿನ ಒಡನಾಟವನ್ಮು ಎಂದಿಗೂ ಮರೆಯಲು ಸಾಧ್ಯವಿಲ್ಲ ಎಂದು ಮೆಚ್ಚುಗೆಯ ನುಡಿಗಳನ್ನಾಡಿದರು.
ಸನ್ಮಾನ ಸಂದರ್ಭ ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಬಾಚರಣಿಯಂಡ ಅನು ಕಾರ್ಯಪ್ಪ, ಪ್ರಧಾನ ಕಾರ್ಯದರ್ಶಿ ಹೆಚ್.ಜೆ. ರಾಕೇಶ್ ಹಾಜರಿದ್ದರು.