ಕೊಡಗು ಜಿಲ್ಲೆಯ ನೂತನ ಜಿಲ್ಲಾಧಿಕಾರಿ ಎಸ್.ಜೆ ಸೋಮಶೇಖರ್ ಅವರಿಗೆ ಸ್ವಾಗತ ಕೋರಿದ ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ

Jan 2, 2026 - 19:37
 0  879
ಕೊಡಗು ಜಿಲ್ಲೆಯ ನೂತನ ಜಿಲ್ಲಾಧಿಕಾರಿ ಎಸ್.ಜೆ ಸೋಮಶೇಖರ್ ಅವರಿಗೆ ಸ್ವಾಗತ ಕೋರಿದ ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ

ಮಡಿಕೇರಿ: ಕೊಡಗು ಜಿಲ್ಲಾಧಿಕಾರಿಯಾಗಿ ನಿಯೋಜನೆಗೊಂಡ ಎಸ್.ಜೆ. ಸೋಮಶೇಖರ್ ಅವರನ್ನು ಕೊಡಗು ಜಿಲ್ಲಾ ಕಾರ್ಯನಿತರ ಪತ್ರಕರ್ತರ ಸಂಘದಿಂದ ಸ್ವಾಗತಿಸಿಕೊಳ್ಳಲಾಯಿತು.

ಮಡಿಕೇರಿಯ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಸಂದರ್ಭ ನೂತನ ಜಿಲ್ಲಾಧಿಕಾರಿಗೆ ಹೂಗುಚ್ಛ ನೀಡಿ ಬರ ಮಾಡಿಕೊಳ್ಳಲಾಯಿತು.

 ಈ ಸಂದರ್ಭ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಬಾಚರಣಿಯಂಡ ಅನು ಕಾರ್ಯಪ್ಪ, ಪ್ರಧಾನ ಕಾರ್ಯದರ್ಶಿ ಹೆಚ್.ಜೆ. ರಾಕೇಶ್, ರಾಜ್ಯ ನಿರ್ದೇಶಕಿ ಬಿ.ಆರ್. ಸವಿತಾ ರೈ, ಜಿಲ್ಲಾ ಉಪಾಧ್ಯಕ್ಷ ನವೀನ್ ಸುವರ್ಣ, ನಿರ್ದೇಶಕರುಗಳಾದ ಸಂತೋಷ್ ರೈ, ಅಬ್ದುಲ್ಲಾ, ಕೊಡಗು ಪ್ರೆಸ್ ಕ್ಲಬ್ ಅಧ್ಯಕ್ಷ ಬೊಳ್ಳಜಿರ ಬಿ ಅಯ್ಯಪ್ಪ ಹಾಜರಿದ್ದರು.

What's Your Reaction?

Like Like 1
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0