ಕೊಡಗು ವಿದ್ಯಾ ಇಲಾಖೆ ನೌಕರರ ಪತ್ತಿನ ಸೌಹಾರ್ದ ಸಹಕಾರಿ ಸಂಘದ ಶತಮಾನೋತ್ಸವ ಸಂಭ್ರಮ:ನೂತನ ಕಟ್ಟಡ ಕಾಮಗಾರಿಗೆ ಚಾಲನೆ‌ ನೀಡಿದ ಶಾಸಕ ಎಎಸ್ ಪೊನ್ನಣ್ಣ

ಕೊಡಗು ವಿದ್ಯಾ ಇಲಾಖೆ ನೌಕರರ ಪತ್ತಿನ ಸೌಹಾರ್ದ ಸಹಕಾರಿ ಸಂಘದ ಶತಮಾನೋತ್ಸವ ಸಂಭ್ರಮ:ನೂತನ ಕಟ್ಟಡ ಕಾಮಗಾರಿಗೆ ಚಾಲನೆ‌ ನೀಡಿದ ಶಾಸಕ ಎಎಸ್ ಪೊನ್ನಣ್ಣ

ಮಡಿಕೇರಿ: ಕೊಡಗು ವಿದ್ಯಾ ಇಲಾಖೆ ನೌಕರರ ಪತ್ತಿನ ಸೌಹಾರ್ದ ಸಹಕಾರಿ ಸಂಘದ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು ಭಾಗವಹಿಸಿದರು. ಮಡಿಕೇರಿಯಲ್ಲಿ ಆಯೋಜನೆಗೊಂಡ ಈ ಕಾರ್ಯಕ್ರಮದಲ್ಲಿ, ಮೊದಲಿಗೆ ಸಹಕಾರಿ ಸಂಘದ ನೂತನ ಕಟ್ಟಡಕ್ಕೆ ಭೂಮಿ ಪೂಜೆಯನ್ನು ಓಂಕಾರೇಶ್ವರ ದೇವಸ್ಥಾನದ ಬಳಿ ಶಾಸಕರು ನೆರವೇರಿಸಿದರು. ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರು ಚೇತನ್, ಉಪಾಧ್ಯಕ್ಷರು ಮುತ್ತಣ್ಣ, ಸದಸ್ಯರು, ನಿರ್ದೇಶಕರು ಮಂಜುನಾಥ್ ಹಾಗೂ ಪ್ರಮುಖರು ಉಪಸ್ಥಿತರಿದ್ದರು.