ರಾಜ್ಯ ಸಂಪುಟ ವಿಸ್ತರಣೆಯಲ್ಲಿ ಕೊಡಗಿಗೆ ಪ್ರಾತಿನಿಧ್ಯ ಸಿಗದಿರುವುದಕ್ಕೆ ಕೊಡಗು ಗೌಡ ಹಿತರಕ್ಷಣಾ ಸಮಿತಿ ಆಕ್ಷೇಪ
admincoorgdaily

ಮಡಿಕೇರಿ: ರಾಜ್ಯ ಸಂಪುಟ ವಿಸ್ತರಣೆಯಲ್ಲಿ ಕೊಡಗಿಗೆ ಪ್ರಾತಿನಿಧ್ಯ ಸಿಗದಿರುವುದಕ್ಕೆ ಕೊಡಗು ಗೌಡ ಹಿತರಕ್ಷಣಾ ಸಮಿತಿ ಆಕ್ಷೇಪ ವ್ಯಕ್ತಪಡಿಸಿದೆ. ಪತ್ರಿಕಾಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಗೌರವಾಧ್ಯಕ್ಷ ಸುರೇಶ್, ರಾಜ್ಯ ಹಾಗೂ ತಮಿಳುನಾಡಿಗೆ ಜೀವಜಲ ನೀಡುವ ಕೊಡಗನ್ನು ನಿರ್ಲಕ್ಷಿಸಿರುವುದು ಸರಿಯಲ್ಲ.
ಸಚಿವ ಸ್ಥಾನ ಸಿಗದ ಪರಿಣಾಮ ಜಿಲ್ಲೆಯ ಅಭಿವೃದ್ಧಿ ಕೆಲಸಗಳು ಕುಂಠಿತಗೊಳ್ಳಲಿವೆ ಎಂದು ತಿಳಿಸಿದರು. ಅಧ್ಯಕ್ಷ ಪರ್ಮಾಲೆ ಗಣೇಶ್ ಅವರು, ಆನೆ-ಮಾನವ ಸಂಘರ್ಷ, ಕಸ್ತೂರಿ ರಂಗನ್ ವರದಿ ಪರಿಹಾರಕ್ಕೆ ಜಿಲ್ಲೆಯ ಸಚಿವರ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟರು. ಸುದ್ದಿಗೋಷ್ಠಿಯಲ್ಲಿ ಸಮಿತಿ ಪ್ರಮುಖರಾದ ದೀಪಕ್, ಪ್ರದೀಪ್ ಕುಮಾರ್, ಮೋಹಿನಿ, ರಿತೀನ್ ಇದ್ದರು.