ಕೊಡಗು ಗೌಡ ವಿದ್ಯಾಸಂಘದಿಂದ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಕಾರ್ಯಕ್ರಮ : ಅರ್ಜಿ ಸಲ್ಲಿಸಲು ಸೆ.15 ಕೊನೆ ದಿನ
ಮಡಿಕೇರಿ ಆ.4 : ಕೊಡಗು ಗೌಡ ವಿದ್ಯಾಸಂಘದ ವತಿಯಿಂದ ಪ್ರತಿ ವರ್ಷದಂತೆ ಈ ಬಾರಿಯು ಗೌಡ ಜನಾಂಗದ ಸಾಧಕ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಕಾರ್ಯಕ್ರಮ ನಡೆಯಲಿದ್ದು, ಸೆ.15 ರೊಳಗೆ ಅರ್ಜಿಯನ್ನು ಸಲಿಸುವಂತೆ ವಿದ್ಯಾಸಂಘದ ಅಧ್ಯಕ್ಷ ಅಂಬೆಕಲ್ ನವೀನ್ ಮನವಿ ಮಾಡಿದ್ದಾರೆ.
10ನೇ ತರಗತಿ ಕನ್ನಡ ಮಾಧ್ಯಮದಲ್ಲಿ ಶೇ.85 ಮೇಲ್ಪಟ್ಟು ಮತ್ತು ಆಂಗ್ಲ ಮಾಧ್ಯಮದಲ್ಲಿ ಶೇ.90 ಮೇಲ್ಪಟ್ಟು ಅಂಕ ಪಡೆದ ವಿದ್ಯಾರ್ಥಿಗಳಿಗೆ, ಪಿ.ಯು.ಸಿಯಲ್ಲಿ ಗ್ರಾಮೀಣ ವಿಭಾಗದಲ್ಲಿ ಶೇ.90 ಮೇಲ್ಪಟ್ಟು ಮತ್ತು ನಗರ ವಿಭಾಗದಲ್ಲಿ ಶೇ.95 ಮೇಲ್ಪಟ್ಟು ಅಂಕ ಪಡೆದ ವಿದ್ಯಾರ್ಥಿಗಳಿಗೆ ಹಾಗೂ ಪದವಿ ತರಗತಿಯಲ್ಲಿ ಅತಿ ಹೆಚ್ಚು ಅಂಕ ಪಡೆದು ಉತ್ತೀರ್ಣರಾಗಿರುವ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುವುದು. ಸಿ.ಇ.ಟಿ ಯಲ್ಲಿ 1000 ರ‍್ಯಾಂಕ್ ಒಳಗೆ ಮತ್ತು ಎನ್.ಇ.ಇ.ಟಿ ಯಲ್ಲಿ ರಾಷ್ಟ್ರಮಟ್ಟದಲ್ಲಿ 5000 ರಾಂಕ್ ಒಳಗೆ ಪಡೆದುಕೊಂಡಿರುವ ಪ್ರತಿಭಾವಂತ ವಿದ್ಯಾರ್ಥಿಗಳು ಪ್ರತಿಭಾ ಪುರಸ್ಕಾರ ಪಡೆಯಲು ಅರ್ಹರಾಗಿದ್ದಾರೆ.
ಗೌಡ ಜನಾಂಗದ ಪ್ರತಿಭಾವಂತ ವಿದ್ಯಾರ್ಥಿಗಳು ದಿನಾಂಕ 15-09-2026ರ ಒಳಗೆ ಅಂಕಪಟ್ಟಿಯ ಜೆರಾಕ್ಸ್ ಪ್ರತಿಯೊಡನೆ ಅರ್ಜಿಯನ್ನು ಸಂಘದ ಕಛೇರಿಗೆ ತಲುಪಿಸಬೇಕು.
ಸನ್ಮಾನ: ವೈದ್ಯಕೀಯ, ಇಂಜಿನಿಯರಿಂಗ್, ಸ್ನಾತಕೋತರ ಪದವಿಯಲ್ಲಿ ರಾಂಕ್ ಪಡೆದ ಮತ್ತು ಕ್ರೀಡೆ, ಕಲೆ, ಸಾಂಸ್ಕೃತಿಕ ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ಸರಕಾರದ ವತಿಯಿಂದ ಕೊಡಲ್ಪಡುವ ರಾಜ್ಯ, ರಾಷ್ಟ್ರ ಮತ್ತು ಅಂತರಾಷ್ಟ್ರೀ ಮಟ್ಟದಲ್ಲಿ ಪ್ರಶಸ್ತಿ ಪಡೆದು ಉತ್ತಮ ಪ್ರದರ್ಶನ ತೋರುತ್ತಿರುವ ಗೌಡ ಜನಾಂಗದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿ ಸನ್ಮಾನಿಸಲಾಗುವುದು.
ಆಸಕ್ತರು ದಿನಾಂಕ 15-09-2026ರ ಒಳಗೆ ಸೂಕ್ತ ದಾಖಲೆ ಸಹಿತ ಅರ್ಜಿಯನ್ನು ಸಂಘದ ಕಛೇರಿಗೆ ತಲುಪಿಸಬೇಕೆಂದು ಅಂಬೆಕಲ್ ನವೀನ್ ಕೋರಿದ್ದಾರೆ. ಹೆಚ್ಚಿನ ಮಾಹಿತಿಗೆ ವಿದ್ಯಾಸಂಘದ ಕಾರ್ಯದರ್ಶಿ ಪೇರಿಯನ ಕೆ.ಉದಯಕುಮಾರ್ (8197297516) ಹಾಗೂ ವ್ಯವಸ್ಥಾಪಕ ಮತ್ತಾರಿ ರಮೇಶ್ (9480775772) ನ್ನು ಸಂಪರ್ಕಿಸಬಹುದಾಗಿದೆ ಎಂದು ತಿಳಿಸಿದ್ದಾರೆ.
What's Your Reaction?
Like
0
Dislike
0
Love
0
Funny
0
Angry
0
Sad
0
Wow
0
