ಶಾಸಕ ಎಎಸ್ ಪೊನ್ನಣ್ಣ ಅವರಿಗೆ ಸಚಿವ ಸ್ಥಾನ ನೀಡಲು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಮನವಿ ಸಲ್ಲಿಸಿದ ಕೊಡಗು ಹಿತರಕ್ಷಣಾ ಸಮಿತಿ

ಶಾಸಕ ಎಎಸ್ ಪೊನ್ನಣ್ಣ ಅವರಿಗೆ ಸಚಿವ ಸ್ಥಾನ ನೀಡಲು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಮನವಿ ಸಲ್ಲಿಸಿದ ಕೊಡಗು ಹಿತರಕ್ಷಣಾ ಸಮಿತಿ

ಬೆಂಗಳೂರು:ಕೊಡಗು ಗೌಡ ಹಿತರಕ್ಷಣ ಸಮಿತಿ ಕೊಡಗು ಜಿಲ್ಲೆ, ಪದಾಧಿಕಾರಿಗಳು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿ, ಮುಂದಿನ ಸಚಿವ ಸಂಪುಟದಲ್ಲಿ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್ ಪೊನ್ನಣ್ಣನವರಿಗೆ ಸಚಿವ ಸ್ಥಾನ ನೀಡಬೇಕಾಗಿ ಮನವಿ ಪತ್ರವನ್ನು ನೀಡಲಾಯಿತು. ಈ ಸಂದರ್ಭದಲ್ಲಿ ಸಮಿತಿಯ ಪರ್ಮಲೆ ಗಣೇಶ್, ಪಟ್ಟಡ ದೀಪಕ್ ಸುರೇಶ್ ಪಿಎಲ್, ಪೂಜಾರಿರ ಪ್ರದೀಪ್ ಕುಮಾರ್, ಕಾಲೇರಮ್ಮನ ಕುಮಾರ್, ವಿಜಯ್ ಕುಮಾರ್ ಕನ್ಯಾನ, ರಿತಿನ್ ಡೆಮ್ಮಲೆ ಮೊದಲಾದವರು ಉಪಸ್ಥಿತರಿದ್ದರು.