ಸಂಸದ ಯದುವೀರ್ ಒಡೆಯರ್ ಭೇಟಿಯಾಗಿ ಮನವಿ ಸಲ್ಲಿಸಿದ ಕೊಡಗು ಜೆಡಿಎಸ್ ಅಲ್ಪಸಂಖ್ಯಾತ ಘಟಕ

Dec 26, 2025 - 11:22
 0  412
ಸಂಸದ ಯದುವೀರ್ ಒಡೆಯರ್ ಭೇಟಿಯಾಗಿ ಮನವಿ ಸಲ್ಲಿಸಿದ ಕೊಡಗು ಜೆಡಿಎಸ್ ಅಲ್ಪಸಂಖ್ಯಾತ ಘಟಕ

ಮಡಿಕೇರಿ:ಕೊಡಗು-ಮೈಸೂರು ಲೋಕಸಭಾ ಕ್ಷೇತ್ರದ‌ ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ರವರನ್ನು ಕೊಡಗು ಜಿಲ್ಲೆಯ ಜೆಡಿಎಸ್ ಅಲ್ಪಸಂಖ್ಯಾತ ಮುಖಂಡರು ಭೇಟಿಯಾಗಿ ವಿವಿಧ ಬೇಡಿಕೆಗಳಿಗೆ ಮನವಿ ಸಲ್ಲಿಸಿದರು.

ಅಲ್ಪಸಂಖ್ಯಾತ ಸಮುದಾಯದ ಸಮುದಾಯ ಭವನ,ಮಸೀದಿ, ಖಬರ್ ಸ್ಥಾನಗಳಿಗೆ ,ತಡೆಗೋಡೆ ಹಾಗೂ ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ಸಂಸದರಲ್ಲಿ ಮನವಿ ಸಲ್ಲಿಸಲಾಯಿತು. 

ಈ ಸಂದರ್ಭ ವಿರಾಜಪೇಟೆ ತಾಲೂಕು ಜೆಡಿಎಸ್ ಯುವ ಘಟಕದ ಅಧ್ಯಕ್ಷ ಸೈಫುದ್ದಿನ್ ಚಾಮಿಯಾಲ,ಕುಶಾಲನಗರ ತಾಲೂಕು ಅಲ್ಪಸಂಖ್ಯಾತ ಅಧ್ಯಕ್ಷ ಶಿಯಾಬುದ್ದೀನ್, ವಿ.ಪಿ.ಎ.ಸ್ ನೆಲ್ಯಹುದಿಕೇರಿ ಮಡಿಕೇರಿ ತಾಲೂಕು ಅಲ್ಪಸಂಖ್ಯಾತ ಅಧ್ಯಕ್ಷ ಅಶ್ರಫ್ ಹಾಕತ್ತೂರ್, ಅಲ್ಪಸಂಖ್ಯಾತ ಘಟಕದ ರಾಜ್ಯ ಕಾರ್ಯದರ್ಶಿ ಅಬಿದ್ ಹುಸೈನ್ ಮೈಸೂರು ಇದ್ದರು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0