ಕೊಡಗು ಪತ್ರಕರ್ತರ ಸಂಘದಿಂದ ಪತ್ರಕರ್ತರ ಕೆಸರುಗದ್ದೆ ಕ್ರೀಡಾಕೂಟ

Aug 3, 2026 - 18:25
 0  35
ಕೊಡಗು ಪತ್ರಕರ್ತರ ಸಂಘದಿಂದ ಪತ್ರಕರ್ತರ  ಕೆಸರುಗದ್ದೆ ಕ್ರೀಡಾಕೂಟ

ಪೊನ್ನಂಪೇಟೆ: ಕೊಡಗು ಪತ್ರಕರ್ತ ಸಂಘ ( ರಿ) ಪೊನ್ನಂಪೇಟೆ ತಾಲೂಕು ಘಟಕ, ಮಡಿಕೇರಿ ವಿಸ್ತಾರಣ ಶಿಕ್ಷಣ ಘಟಕ, ಮತ್ತು ಪೊನ್ನಂಪೇಟೆ ಅರಣ್ಯ ಮಹಾವಿದ್ಯಾಲಯ ಸಹಯೋಗದಲ್ಲಿ ಪೊನ್ನಂಪೇಟೆ ತಾಲೂಕು ಘಟಕದ ಅಧ್ಯಕ್ಷ ಕಿರಿಯಮಾಡ ರಾಜ್ ಕುಶಾಲಪ್ಪ ಅವರ ಮುಂದಾಳತ್ವದಲ್ಲಿ ಅರಣ್ಯ ಮಹಾವಿದ್ಯಾಲಯದ ಗದ್ದೆಯಲ್ಲಿ ಆಯೋಜಿಸಿದ್ದ ಪತ್ರಕರ್ತರ ಕೆಸರುಗದ್ದೆ ಕ್ರೀಡಾಕೂಟದಲ್ಲಿ ಜಿಲ್ಲೆಯ ಪತ್ರಕರ್ತರು ಕೆಸರಿನಲ್ಲಿ ವಿವಿಧ ಕ್ರೀಡೆಗಳಲ್ಲಿ ಪಾಲ್ಗೊಂಡು ಸಂಭ್ರಮಿಸಿದರು.

ಕೃಷಿ ಹಾಗೂ ತೋಟಗಾರಿಕೆ ಸಂಶೋಧನಾ ಘಟಕದ ಕ್ಷೇತ್ರ ಅಧೀಕ್ಷಕ ಡಾ. ಸಿ. ಪ್ರಶಾಂತ್ ಅವರು ಚೆಂಡು ಎಸೆಯುವ ಮೂಲಕ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿ ಕೆಸರುಗದ್ದೆ ಕ್ರೀಡಾಕೂಟ ಎನ್ನುವುದು ಕೊಡಗಿನ ಅನಾದಿಕಾಲದ ಸಂಪ್ರದಾಯಗಳಲ್ಲಿ ಒಂದಾಗಿದೆ, ಇಂತಹ ಕ್ರೀಡಾಕೂಟಗಳಿಂದ ಗ್ರಾಮೀಣ ಪ್ರತಿಭೆಗಳು ಬೆಳಕಿಗೆ ಬರಲು ಸಾಧ್ಯವಾಗುತ್ತದೆಂದರಲ್ಲದೆ ದಿನಗಳಲ್ಲಿಯೂ ಕೂಡ ಗ್ರಾಮ ಮಟ್ಟದಲ್ಲಿ ಇಂತಹ ಕ್ರೀಡಾಕೂಟಗಳನ್ನು ಆಯೋಜಿಸುವಂತಾಗಲಿ ಎಂದು ಆಶೀಸಿದರು.

 ಹ್ಯಾಂಡ್‌ಬಾಲ್ , ಹಗ್ಗಜಗ್ಗಾಟ, ಹಾಗೂ ಓಟದ ಸ್ಪರ್ಧೆ, ಸೇರಿದಂತೆ ವಿವಿಧ ಸ್ಪರ್ಧೆಗಳಲ್ಲಿ ಜಿಲ್ಲೆಯ ಸುಮಾರು 50 ಕ್ಕೂ ಹೆಚ್ಚು ಪತ್ರಕರ್ತರು ಪಾಲ್ಗೊಂಡು ಸಂಭ್ರಮಿಸಿದರು. ಈ ಸಂದರ್ಭ ಕೊಡಗು ಪತ್ರಕರ್ತರ ಸಂಘ ಕ್ಷೇಮಾಭಿವೃದಿ ಸಂಘದ ಅಧ್ಯಕ್ಷ ಜಿ. ವಿ ರವಿಕುಮಾರ್, ಗೌರವ ಸಲಹೆಗಾರ, ಬಿ ಜಿ ಅನಂತಶಯನ ಮಡಿಕೇರಿ ವಿಸ್ತರಣಾ ಶಿಕ್ಷಣ ಘಟಕದ ಮುಖ್ಯಸ್ಥ ಡಾ. ಆರ್ ಏನ್ ಕೆಂಚಾರೆಡ್ಡಿ., ಡಾ, ದೈಹಿಕ ಈಶ್ವರ್, ವಿರಾಜಪೇಟೆ ತಾಲೂಕು ಅಧ್ಯಕ್ಷ ಮಲ್ಲೇಂಗಡ ಮಧುಷ್ ಪೂವಯ್ಯ, ಸೋಮವಾರಪೇಟೆ ತಾಲೂಕು ಅಧ್ಯಕ್ಷ ಹರೀಶ್ ಕುಮಾರ್, ಪೊನ್ನಂಪೇಟೆ ತಾಲೂಕು ಸಂಘದ ಉಪಾಧ್ಯಕ್ಷ ಚಮ್ಮಟೀರ ಪ್ರವೀಣ್, ಕಾರ್ಯದರ್ಶಿ ವಿನೋದ್ ಮೂಡಗದ್ದೆ, ಸಂಘದ ಪದಾಧಿಕಾರಿಗಳು ಸದಸ್ಯರು, ಕ್ರೀಡಾಕೂಟದಲ್ಲಿ ಭಾಗವಹಿಸಿದ್ದರು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0