ಗೂಡ್ಸ್ ವಾಹನದಲ್ಲಿ ಪ್ರಯಾಣಿಕರ ಸಾಗಾಟ: ₹9500 ದಂಡ ವಿಧಿಸಿದ ಕೊಡಗು ಪೊಲೀಸ್
admincoorgdaily

ಸೋಮವಾರಪೇಟೆ: ಗೂಡ್ಸ್ ವಾಹನದಲ್ಲಿ ಕಾನೂನು ಬಾಹಿರವಾಗಿ ಪ್ರಯಾಣಿಕರನ್ನು ಸಾಗಿಸುತ್ತಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದ ಹಿನ್ನೆಲೆ, ಕೊಡಗು ಜಿಲ್ಲಾ ಪೊಲೀಸರು ತಕ್ಷಣ ಕ್ರಮ ಕೈಗೊಂಡಿದ್ದಾರೆ.
ಸೋಮವಾರಪೇಟೆ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಗೂಡ್ಸ್ ವಾಹನದ ಹಿಂಬದಿಯಲ್ಲಿ ಹಲವು ಮಂದಿ ಪ್ರಯಾಣಿಸುತ್ತಿದ್ದ ದೃಶ್ಯ ವಿಡಿಯೋದಲ್ಲಿ ಸೆರೆಯಾಗಿತ್ತು. ಈ ಕುರಿತು ಮಾಹಿತಿ ಪಡೆದ ಪೊಲೀಸರು ಸಂಬಂಧಪಟ್ಟ ವಾಹನದ ಚಾಲಕನ ವಿರುದ್ಧ ಮೋಟಾರು ವಾಹನ ಕಾಯ್ದೆಯಡಿ ಪ್ರಕರಣ ದಾಖಲಿಸಿ ರೂ 9,500 ದಂಡ ವಿಧಿಸಿದ್ದಾರೆ.
"ಗೂಡ್ಸ್ ವಾಹನದಲ್ಲಿ ಪ್ರಯಾಣಿಕರನ್ನು ಸಾಗಿಸುವುದು ಅಪಾಯಕಾರಿ. ಜೀವಕ್ಕೆ ಅಪಾಯವಿದೆ. ಸಾರ್ವಜನಿಕರು ನಿಯಮಗಳನ್ನು ಪಾಲಿಸಬೇಕು" ಎಂದು ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಎಸ್. ಬಿಂದುಮಣಿ ತಿಳಿಸಿದ್ದಾರೆ.