ಕೊಡಗು ಸುನ್ನಿ ವೆಲ್ಫೇರ್ ಅಸೋಸಿಯೇಷನ್ ಯುಎಇ ಬೆಳ್ಳಿ ಹಬ್ಬ; ಫೆ.08ರಂದು ಕನೆಕ್ಟ್ ಕೊಡಗು ಕಾರ್ಯಕ್ರಮ

Jan 22, 2026 - 16:16
 0  159
ಕೊಡಗು ಸುನ್ನಿ ವೆಲ್ಫೇರ್ ಅಸೋಸಿಯೇಷನ್ ಯುಎಇ ಬೆಳ್ಳಿ ಹಬ್ಬ; ಫೆ.08ರಂದು ಕನೆಕ್ಟ್ ಕೊಡಗು ಕಾರ್ಯಕ್ರಮ

ಮಡಿಕೇರಿ: ಕೊಡಗು ಸುನ್ನಿ ವೆಲ್ಫೇರ್ ಅಸೋಸಿಯೇಷನ್ ಯುಎಇ ತನ್ನ ಬೆಳ್ಳಿ ಹಬ್ಬದ ಪ್ರಯುಕ್ತ ಕನೆಕ್ಟ್ ಕೊಡಗು 2025 ಎಂಬ ವಿಶೇಷ ಕಾರ್ಯಕ್ರಮವನ್ನು ಫೆ.8 ರಂದು ಯುಎಇಯ ಶಾರ್ಜಾ ಅಲ್ ಬತಾಯ ಗಾರ್ಡನ್‌ನಲ್ಲಿ ಆಯೋಜಿಸಲಾಗಿದೆ ಎಂದು ಕೊಡಗು ಸುನ್ನಿ ವೆಲ್ಫೇರ್ ಅಸೋಸಿಯೇಷನ್ ಯುಎಇ ಅಧ್ಯಕ್ಷ ಅಹ್ಮದ್ ಚಾಮಿಯಾಲ್ ತಿಳಿಸಿದರು.

 ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮಿತಿ ಯುಎಇಯಲ್ಲಿ ಸುಮಾರು ಎರಡೂವರೆ ದಶಕಗಳಿಂದ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದೆ. ಅನಿವಾಸಿ ಕೊಡಗಿನ ಸಹೃದಯಿ ಬಾಂಧವರ ಸಹಕಾರದಿಂದ ಜಿಲ್ಲೆಯ ಶೋಷಿತ ವರ್ಗಗಳ ಬೆಂಬಲಕ್ಕೆ ನಿಂತಿದೆ. ಶೈಕ್ಷಣಿಕ ಹಾಗೂ ಸಾಮಾಜಿಕವಾಗಿ ಹಿಂದುಳಿದವರನ್ನು ಮುಂದೆ ತರಲು ವಿದೇಶಗಳಿಂದ ಕೈಜೋಡಿಸಿ, ಸಾಂತನ ಕಾರ್ಯಕ್ರಮಗಳ ಮೂಲಕ ಸಂಕಷ್ಟದಲ್ಲಿರುವವರಿಗೆ ನೆರವು ನೀಡುತ್ತಿರುವ ಸಂಘಟನೆಯಾಗಿದೆ ಎಂದು ತಿಳಿಸಿದರು.

 ಕೊಡಗು ಸುನ್ನಿ ವೆಲ್ಫೇರ್ ಅಸೋಸಿಯೇಷನ್ ಯುಎಇ ಸಲಹಾ ಸಮಿತಿ ನಾಯಕ ಉಸ್ಮಾನ್ ಹಾಜಿ ನಾಪೋಕ್ಲು ಮಾತನಾಡಿ, ಅಂದು ಬೆಳಗ್ಗೆ 9 ಗಂಟೆಗೆ ನಡೆಯುವ ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕೊಡಗು ಜಿಲ್ಲಾ ಉಸ್ತುವಾರಿ ಸಚಿವರು, ಸಣ್ಣ ನೀರಾವರಿ ಮತ್ತು ವಿಜ್ಞಾನ ಹಾಗೂ ತಂತ್ರಜ್ಞಾನ ಸಚಿವ ಎನ್.ಎಸ್.ಬೋಸರಾಜು, ಮಡಿಕೇರಿ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕ ಡಾ.ಮಂತರ್ ಗೌಡ, ಹೊದ್ದೂರು ಗ್ರಾಮ ಪಂಚಾಯತ್ ಅಧ್ಯಕ್ಷರು, ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹಂಸ ಕೊಟ್ಟಮುಡಿ, ಕರ್ನಾಟಕ ಮುಸ್ಲಿಂ ಜಮಾಅತ್ ಕೊಡಗು ಅಧ್ಯಕ್ಷರು ಹಾಗೂ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಲತೀಫ್ ಸುಂಟಿಕೊಪ್ಪ, ಹೊಸ್ಕೇರಿ ಗ್ರಾಮ ಪಂಚಾಯತ್ ಪಿಡಿಒ ಎ.ಎ.ಅಬ್ದುಲ್ಲಾ, ವಕೀಲರಾದ ಸೂಫಿಯಾನ್ ಮಡಿಕೇರಿ ಸೇರಿದಂತೆ ಅನೇಕ ಧಾರ್ಮಿಕ, ಸಾಮಾಜಿಕ ಹಾಗೂ ರಾಜಕೀಯ ಮುಖಂಡರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

 ಅಲ್ಲದೇ ಕಾರ್ಯಕ್ರಮದ ಅಂಗವಾಗಿ ವಾಲಿಬಾಲ್, ಹಗ್ಗ ಜಗ್ಗಾಟ, ಫುಟ್ಬಾಲ್ ಸೇರಿದಂತೆ ವಿವಿಧ ಕ್ರೀಡಾಕೂಟಗಳನ್ನು ಆಯೋಜಿಸಲಾಗಿದೆ. ಜೊತೆಗೆ ಮಕ್ಕಳಿಗಾಗಿ ವಿಶೇಷ ಕ್ರೀಡೆಗಳು ಹಾಗೂ ಮಹಿಳೆಯರಿಗಾಗಿ ವಿವಿಧ ಚಟುವಟಿಕೆಗಳೂ ನಡೆಯಲಿವೆ.

 ಸಂಜೆ 4 ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದ್ದು, ಗಣ್ಯರ ಉಪಸ್ಥಿತಿಯಲ್ಲಿ ಕಾರ್ಯಕ್ರಮಕ್ಕೆ ಅದ್ಧೂರಿ ತೆರೆ ಬೀಳಲಿದೆ ಎಂದು ವಿವರಿಸಿದರು. ಸುದ್ದಿಗೋಷ್ಠಿಯಲ್ಲಿ ಕೊಡಗು ಸುನ್ನಿ ವೆಲ್ಫೇರ್ ಅಸೋಸಿಯೇಷನ್ ಯುಎಇ ಉಪಾಧ್ಯಕ್ಷ ಅಶ್ರಫ್ ಕುಂಜಿಲ ಇದ್ದರು.

What's Your Reaction?

Like Like 2
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0