ಕೊಡಗು ವಿಶ್ವವಿದ್ಯಾಲಯದ ಬಿ.ಎಡ್ ಪದವಿ ಫಲಿತಾಂಶ ಪ್ರಕಟ
ಮಡಿಕೇರಿ:ಕೊಡಗು ವಿಶ್ವವಿದ್ಯಾಲಯದ 2025-26ನೇ ಸಾಲಿನ ಪ್ರಥಮ ಮತ್ತು ತೃತೀಯ ಸೆಮಿಸ್ಟರ್ ಬಿ.ಎಡ್ ಪದವಿ ಪರೀಕ್ಷಾ ಫಲಿತಾಂಶವನ್ನು ಇಂದು ಪ್ರಕಟಿಸಲಾಗಿದೆ. ಪರೀಕ್ಷೆಯ ಮೌಲ್ಯಮಾಪನ ಪೂರ್ಣವಾಗಿ ಎರಡು ದಿನದಲ್ಲಿ ಅತೀ ಶೀಘ್ರವಾಗಿ ವಿಶ್ವವಿದ್ಯಾಲಯವು ಫಲಿತಾಂಶವನ್ನು ಪ್ರಕಟಿಸಿದೆ.
ಜುಲೈ ತಿಂಗಳಲ್ಲಿ ನಡೆದ ಪರೀಕ್ಷೆಯಲ್ಲಿ ವಿರಾಜಪೇಟೆಯ ಸರ್ವೋದಯ ಬಿ.ಎಡ್ ಕಾಲೇಜು ಮತ್ತು ಪೊನ್ನಂಪೇಟೆಯ ಸಾಯಿ ಶಂಕರ್ ಕಾಲೇಜುಗಳ ಒಟ್ಟು ಸುಮಾರು 200 ವಿದ್ಯಾರ್ಥಿಗಳು ಹಾಜರಾಗಿದ್ದರು.
ಮೌಲ್ಯಮಾಪನ ಪ್ರಕ್ರಿಯೆಯನ್ನು ಘಟಕ ಮಹಾವಿದ್ಯಾಲಯ ಮಡಿಕೇರಿಯ ಫೀಲ್ಡ್ ಮಾರ್ಷಲ್ ಕೆ. ಎಂ ಕಾರ್ಯಪ್ಪ ಕಾಲೇಜಿನಲ್ಲಿ ಮೌಲ್ಯಮಾಪನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಜಿಲ್ಲೆಯ ಮೌಲ್ಯಮಾಪಕರು ಸಕ್ರಿಯವಾಗಿ ಭಾಗವಹಿಸಿ ಮೌಲ್ಯಮಾಪನ ಕಾರ್ಯವನ್ನು ಯಶಸ್ವಿಯಾಗಿ ನಿರ್ವಹಿಸಿದ್ದಾರೆ.
ಸೆಮಿಸ್ಟರ್ ಪರೀಕ್ಷೆಗಳಿಗೆ ಸಂಬಂಧಿಸಿದ ಎಲ್ಲಾ ಪ್ರಕ್ರಿಯೆಗಳನ್ನು ಸಮಗ್ರ ವಿಶ್ವವಿದ್ಯಾಲಯ ಮತ್ತು ಕಾಲೇಜು ನಿರ್ವಹಣಾ ವ್ಯವಸ್ಥೆ (UUCMS) ಮೂಲಕ ಯಶಸ್ವಿಯಾಗಿ ನಡೆಸಲಾಗಿದ್ದು, ಬಿ.ಎಡ್ ಪದವಿ ವಿದ್ಯಾರ್ಥಿಗಳು ಪರೀಕ್ಷಾ ಫಲಿತಾಂಶವನ್ನು UUCMS ಅಥವಾ ಕೊಡಗು ವಿಶ್ವವಿದ್ಯಾಲಯದ ವೆಬ್‌ಸೈಟ್ KUK.Karnataka.gov.in ಮುಖಾಂತರ ಪಡೆಯಲು ಲಭ್ಯವಿದೆ. ಪರೀಕ್ಷಾ ಫಲಿತಾಂಶವನ್ನು ಕೊಡಗು ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ. ಅಶೋಕ ಸಂಗಪ್ಪ ಆಲೂರ ಅವರು UUCMS ತಂತ್ರಾಂಶದಲ್ಲಿ ಪ್ರಕಟಿಸಿದರು. ಇದೇ ಸಂದರ್ಭದಲ್ಲಿ ಕೊಡಗು ವಿವಿ ಕುಲಸಚಿವರು (ಮೌಲ್ಯಮಾಪನ) ಡಾ. ಸುರೇಶ್ ಎಂ ಮತ್ತು ವಿಶೇಷಾಧಿಕಾರಿ (ಪರೀಕ್ಷಾಂಗ) ಪ್ರೊ. ರವಿಶಂಕರ್ ಎಂ ಎನ್ ಮತ್ತು UUCMS ಸಿಬ್ಬಂದಿ ಉಪಸ್ಥಿತರಿದ್ದರು.
What's Your Reaction?
Like
1
Dislike
1
Love
0
Funny
0
Angry
1
Sad
0
Wow
0
