ಕೊಡಗು ವಿಶ್ವವಿದ್ಯಾಲಯದ ಬಿ.ಎಡ್ ಪದವಿ ಮತ್ತು ಸ್ನಾತಕ ಪದವಿಗಳ ಫಲಿತಾಂಶ ಪ್ರಕಟ

ಕೊಡಗು ವಿಶ್ವವಿದ್ಯಾಲಯದ ಬಿ.ಎಡ್ ಪದವಿ ಮತ್ತು ಸ್ನಾತಕ ಪದವಿಗಳ ಫಲಿತಾಂಶ ಪ್ರಕಟ

ಕುಶಾಲನಗರ: ಕುಶಾಲನಗರ: ಕೊಡಗು ವಿಶ್ವವಿದ್ಯಾಲಯದ ದ್ವಿತೀಯ ಮತ್ತು ಚತುರ್ಥ ಸೆಮಿಸ್ಟರ್ ಬಿ.ಎಡ್ ಪದವಿ ಮತ್ತು ಸ್ನಾತಕ ಪದವಿ ಪರೀಕ್ಷಾ ಫಲಿತಾಂಶವನ್ನು ಪರೀಕ್ಷಾ ಫಲಿತಾಂಶವನ್ನು ಕೊಡಗು ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ. ಅಶೋಕ ಸಂಗಪ್ಪ ಆಲೂರ ಅವರು ಆನ್ಲೈನ್ ತಂತ್ರಾಂಶದಲ್ಲಿ ವಿಶ್ವವಿದ್ಯಾಲಯದ ವೆಬ್‌ಸೈಟ್‌ನಲ್ಲಿ ಅಧಿಕೃತವಾಗಿ ಪ್ರಕಟಿಸಿದರು.

ಕೊಡಗು ವಿಶ್ವವಿದ್ಯಾಲಯದ ಘಟಕ ಮತ್ತು ಸಂಯೋಜಿತ ಮಹಾವಿದ್ಯಾಲಯಗಳ 2025-26ನೇ ಶೈಕ್ಷಣಿಕ ಸಾಲಿನ ಬಿಕಾಂ, ಬಿಬಿಎ ಮತ್ತು ಬಿಎಸ್ಸಿ ಪದವಿಗಳ ಪ್ರಥಮ/ತೃತೀಯ/ ಪಂಚಮ ಸೆಮಿಸ್ಟರ್‌ನ (ಆವರ್ತನ ಮತ್ತು ಪುನರಾವರ್ತನ) ಪರೀಕ್ಷೆಗಳು ಮುಗಿದ ನಾಲ್ಕು ದಿನಗಳಲ್ಲಿ ಫಲಿತಾಂಶವನ್ನು ಪ್ರಕಟಿಸುವ ಮೂಲಕ ಅತೀ ಕಡಿಮೆ ಅವಧಿಯಲ್ಲಿ ಪರೀಕ್ಷೆಗಳನ್ನು ನಡೆಸಿ ಫಲಿತಾಂಶವನ್ನು ಪ್ರಕಟಿಸಿದ ಕೀರ್ತಿಗೆ ಕೊಡಗು ವಿಶ್ವವಿದ್ಯಾಲಯ ಭಾಜನವಾಗಿದೆ.

ರಾಜ್ಯ ಶಿಕ್ಷಣ ನೀತಿ -2024/ರಾಷ್ಟ್ರೀಯ ಶಿಕ್ಷಣ ನೀತಿ 2020 ರ ಅಡಿಯಲ್ಲಿ ನಡೆದ ಪ್ರಥಮ/ ತೃತೀಯ/ಪಂಚಮ ವರ್ಷದ ಸ್ನಾತಕ ಪದವಿ ಪರೀಕ್ಷಾ ಫಲಿತಾಂಶವನ್ನು ಅತೀ ಶೀಘ್ರವಾಗಿ ಪ್ರಕಟಿಸಿದೆ. ವಿಶ್ವವಿದ್ಯಾಲಯವು ಸ್ನಾತಕ ಪದವಿ ಪರೀಕ್ಷೆಗಳು ಮುಗಿದ 20 ದಿನಗಳೊಳಗೆ ಫಲಿತಾಂಶವನ್ನು ಪ್ರಕಟಿಸಬೇಕು ಎಂಬ ಯುಜಿಸಿಯ ನಿರ್ದೇಶನದಂತೆ ಕೇವಲ ನಾಲ್ಕು ದಿನಗಳಲ್ಲಿ ಫಲಿತಾಂಶವನ್ನು ಪ್ರಕಟಿಸುವ ಮೂಲಕ ಕೊಡಗು ವಿಶ್ವವಿದ್ಯಾಲಯವು ಈ ಹಿಂದೆಯೂ ಸಾರ್ವಜನಿಕ ಮೆಚ್ಚುಗೆಗೆ ಪಾತ್ರವಾಗಿತ್ತು.

ಇದೇ ಜನವರಿ ಮತ್ತು ಫೆಬ್ರವರಿ ತಿಂಗಳಲ್ಲಿ ನಡೆದ ಪರೀಕ್ಷೆಯಲ್ಲಿ ಕೊಡಗಿನ 22 ಕಾಲೇಜುಗಳ ಸುಮಾರು 6000 ವಿದ್ಯಾರ್ಥಿಗಳು ಹಾಜರಾಗಿದ್ದರು. ಹಾಗೆಯೇ ಫೆಬ್ರವರಿ ತಿಂಗಳಲ್ಲಿ ನಡೆದ ಪರೀಕ್ಷೆಯಲ್ಲಿ ವಿರಾಜಪೇಟೆಯ ಸರ್ವೋದಯ ಬಿ.ಎಡ್ ಕಾಲೇಜು ಮತ್ತು ಪೊನ್ನಂಪೇಟೆಯ ಸಾಯಿ ಶಂಕರ್ ಕಾಲೇಜುಗಳ ಒಟ್ಟು 95 ವಿದ್ಯಾರ್ಥಿಗಳು ಹಾಜರಾಗಿದ್ದರು. ಬಿಎಡ್ ಪರೀಕ್ಷೆ ಮುಗಿದು ಎಂಟು ದಿನಗಳಲ್ಲಿ ಮತ್ತು ಮೌಲ್ಯಮಾಪನ ಪೂರ್ಣವಾಗಿ ಒಂದು ದಿನದಲ್ಲಿ ಅತೀ ಶೀಘ್ರವಾಗಿ ಪ್ರಕಟಿಸಿದ ಹಿರಿಮೆಗೆ ಪಾತ್ರವಾಗಿದೆ ಕೊಡಗು ವಿಶ್ವವಿದ್ಯಾಲಯ.

ಕೊಡಗು ವಿಶ್ವವಿದ್ಯಾಲಯದ ಸ್ನಾತಕ ವಿದ್ಯಾರ್ಥಿಗಳ ಸೆಮಿಸ್ಟರ್ ಪರೀಕ್ಷೆಗಳ ಮೌಲ್ಯಮಾಪನ ಪ್ರಕ್ರಿಯೆಯನ್ನು ಘಟಕ ಮಹಾವಿದ್ಯಾಲಯವಾಗಿರುವ ಮಡಿಕೇರಿಯ ಫೀಲ್ಡ್ ಮಾರ್ಷಲ್ ಕೆ ಎಂ ಕಾರ್ಯಪ್ಪ ಕಾಲೇಜಿನಲ್ಲಿ ವ್ಯವಸ್ಥಿತವಾಗಿ ಮೌಲ್ಯಮಾಪನ ಕೇಂದ್ರವನ್ನು ಸಿದ್ಧಪಡಿಸಿಕೊಂಡು, ಜಿಲ್ಲೆಯ ವಿವಿಧ ಸ್ನಾತಕ ಪದವಿ ಕಾಲೇಜುಗಳ ವಿಷಯವಾರು ಮೌಲ್ಯಮಾಪಕರು ಸಕ್ರಿಯವಾಗಿ ಭಾಗವಹಿಸಿ ಮೌಲ್ಯಮಾಪನ ಕಾರ್ಯವನ್ನು ಯಶಸ್ವಿಯಾಗಿ ನಿರ್ವಹಿಸಿದ್ದಾರೆ.

ಸೆಮಿಸ್ಟರ್ ಪರೀಕ್ಷೆಗಳಿಗೆ ಸಂಬಂಧಿಸಿದ ಎಲ್ಲಾ ಪ್ರಕ್ರಿಯೆಗಳನ್ನು ಸಮಗ್ರ ವಿಶ್ವವಿದ್ಯಾಲಯ ಮತ್ತು ಕಾಲೇಜು ನಿರ್ವಹಣಾ ವ್ಯವಸ್ಥೆ (UUMS) ಮೂಲಕ ಯಶಸ್ವಿಯಾಗಿ ನಡೆಸಲಾಗಿದ್ದು, ಬಿಎಡ್ ಮತ್ತು ಸ್ನಾತಕ ಪದವಿ ವಿದ್ಯಾರ್ಥಿಗಳು ಪರೀಕ್ಷಾ ಫಲಿತಾಂಶವನ್ನು UUCMS ಅಥವಾ ಕೊಡಗು ವಿಶ್ವವಿದ್ಯಾಲಯದ ವೆಬ್‌ಸೈಟ್ KUK.Karnataka.gov.in ಮುಖಾಂತರ ವಿದ್ಯಾರ್ಥಿಗಳ ನೋಂದಣಿ ಸಂಖ್ಯೆ ಮೂಲಕ ನೋಡಲು ಲಭ್ಯವಿದೆ.

ಇದೇ ಸಂದರ್ಭದಲ್ಲಿ ಕೊಡಗು ವಿಶ್ವವಿದ್ಯಾಲಯದ ಕುಲಸಚಿವರು (ಮೌಲ್ಯಮಾಪನ) ಆದ ಡಾ. ಸುರೇಶ್ ಎಂ., ಕೊಡಗು ವಿವಿ ಪರೀಕ್ಷಾಂಗದ ವಿಶೇಷಾಧಿಕಾರಿ ದ ಪ್ರೊ. ರವಿಶಂಕರ್ ಎಂ ಎನ್, uucms ಸಿಬ್ಬಂದಿಗಳು ಮತ್ತು ಉಪನ್ಯಾಸಕರುಗಳು ಉಪಸ್ಥಿತರಿದ್ದರು.