ಕೊಡಗು ವಿಶ್ವವಿದ್ಯಾಲಯ ಅಂತರ್ ಕಾಲೇಜು‌ ಮಟ್ಟದ ಕಬಡ್ಡಿ ಪಂದ್ಯಾವಳಿಗೆ ಚಾಲನೆ

Nov 28, 2025 - 20:35
Nov 28, 2025 - 20:35
 0  394
ಕೊಡಗು ವಿಶ್ವವಿದ್ಯಾಲಯ ಅಂತರ್ ಕಾಲೇಜು‌ ಮಟ್ಟದ ಕಬಡ್ಡಿ ಪಂದ್ಯಾವಳಿಗೆ ಚಾಲನೆ

ಮಡಿಕೇರಿ: ಕೊಡಗು ವಿಶ್ವವಿದ್ಯಾಲಯ,ಫೀಲ್ಡ್ ಮಾರ್ಷಲ್ ಕೆ.ಎಂ ಕಾರ್ಯಪ್ಪ ಕಾಲೇಜು‌ ಮಡಿಕೇರಿ ಇವರ ಸಹಯೋಗದೊಂದಿಗೆ,ಕಾಲೇಜು ಮೈದಾನದಲ್ಲಿ ಕೊಡಗು ವಿಶ್ವವಿದ್ಯಾಲಯ ಮಟ್ಟದ ಅಂತರ್ ಕಾಲೇಜು ಪುರುಷ ಮತ್ತು ಮಹಿಳೆಯರ ಕಬಡ್ಡಿ ಪಂದ್ಯಾವಳಿಗೆ ಚಾಲನೆ ದೊರೆತಿದೆ.

 ಕಬಡ್ಡಿ ಪಂದ್ಯಾವಳಿಗೆ ಚಾಲನೆ ನೀಡಿದ ಮಾತನಾಡಿದ ಕೊಡಗು ವಿಶ್ವವಿದ್ಯಾಲಯದ ಪರೀಕ್ಷಾಂಗ ವಿಭಾಗದ ಕುಲಸಚಿವರಾದ,ಡಾ.ಸುರೇಶ್ ಕುಮಾರ್ ಅವರು ಮಾತನಾಡಿ, ಕಬಡ್ಡಿಯ ಇತಿಹಾಸವನ್ನು ಮಹಾಭಾರತ ಕಾಲದಿಂದಲೇ ಜಾಲ್ತಿಯಲ್ಲಿದೆ.ಈಗ ಪ್ರೊ ಕಬಡ್ಡಿ ಮುಖಾಂತರ ರಾಷ್ಟ್ರದಲ್ಲಿ ಸ್ಥಾನವನ್ನು ನೀಡಲಾಗಿದೆ.ದೇಶದ ಅಭಿವೃದ್ಧಿಯಲ್ಲಿ ಕ್ರೀಡೆಯು ಪ್ರಮುಖ ಪಾತ್ರ ವಹಿಸುತ್ತದೆ.ಅದಲ್ಲದೇ ಕ್ರೀಡೆಯಿಂದ ಮನುಷ್ಯನ ಜೀವನದಲ್ಲಿ ಹಲವಾರು ಬದಲಾವಣೆಗಳನ್ನು ಕಾಣಬಹುದೆಂದು ಹೇಳಿದರು.

 ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಬೊಳ್ಳಜಿರ ಅಯ್ಯಪ್ಪ ಅವರು ಮಾತನಾಡಿ, ಎಲ್ಲಾ ಕ್ರೀಡಾಪಟುಗಳು ಸೋಲು-ಗೆಲುವನ್ನು ಸಮಾನವಾಗಿ ಸ್ವೀಕರಿಸಬೇಕೆಂದು ಕರೆ ನೀಡಿದರು.

ಕಾಲೇಜಿನ ಪ್ರಾಂಶುಪಾಲರಾದ ಮೇಜರ್ ಪ್ರೊ.ರಾಘವ ಬಿ. ಮಾತನಾಡಿ,ಫೀಲ್ಡ್ ಮಾರ್ಷಲ್ ಕಾಲೇಜಿನಲ್ಲಿ ವಿದ್ಯಾಭ್ಯಾಸ ಪಡೆದ ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಹಲವಾರು ಸಾಧನೆಗಳನ್ನ ಮಾಡಿದ್ದಾರೆ.ಅದಲ್ಲದೇ ಕಾಲೇಜಿನಲ್ಲಿ ನಿರಂತರವಾಗಿ ಕ್ರೀಡೆಗೆ ಪ್ರೋತ್ಸಾಹ ನೀಡುತ್ತಾ ಬಂದಿದ್ದೇವೆ ಎಂದರು. ಕಬಡ್ಡಿ ಪಂದ್ಯಾವಳಿಗೆ ಅತಿಥಿಗಳು ತೆಂಗಿನ ಕಾಯಿ ಹೊಡೆಯುವುದರ ಮೂಲಕ ಕಬಡ್ಡಿ ಪಂದ್ಯಾವಳಿಗೆ ಚಾಲನೆ ನೀಡಿದರು. ಕಾಲೇಜಿನ ದೈಹಿಕ ಶಿಕ್ಷಕ ರಮೇಶ್ ಅವರು ಕ್ರೀಡಾಕೂಟದ ನೇತೃತ್ವವನ್ನು ವಹಿಸಿದ್ದರು.

What's Your Reaction?

Like Like 1
Dislike Dislike 1
Love Love 3
Funny Funny 0
Angry Angry 0
Sad Sad 0
Wow Wow 0