ಯಶಸ್ವಿಯಾಗಿ ನಡೆದ ಕೊಡಗು ವಿಶ್ವವಿದ್ಯಾಲಯ ಕಬಡ್ಡಿ ತಂಡದ ಆಯ್ಕೆ ಪ್ರಕ್ರಿಯೆ

ಯಶಸ್ವಿಯಾಗಿ ನಡೆದ ಕೊಡಗು ವಿಶ್ವವಿದ್ಯಾಲಯ ಕಬಡ್ಡಿ ತಂಡದ ಆಯ್ಕೆ ಪ್ರಕ್ರಿಯೆ

ಸೋಮವಾರಪೇಟೆ: ಕೊಡಗು ವಿಶ್ವವಿದ್ಯಾಲಯದ ಕಬಡ್ಡಿ ತಂಡಕ್ಕಾಗಿ ಆಯ್ಕೆ ಪ್ರಕ್ರಿಯೆ ಸೋಮವಾರಪೇಟೆ ಸೇಂಟ್ ಜೋಸೆಫ್ ಪದವಿ ಕಾಲೇಜಿನಲ್ಲಿ ನಡೆಯಿತು.ಟ್ರಯಲ್ಸ್‌ನಲ್ಲಿ, ಜಿಲ್ಲೆಯ ವಿವಿಧ ಕಾಲೇಜುಗಳಿಂದ ಬಂದ ವಿದ್ಯಾರ್ಥಿಗಳು ತಮ್ಮ ಕ್ರೀಡಾ ಸಾಮರ್ಥ್ಯವನ್ನು ಪ್ರದರ್ಶಿಸಿದರು.

ಈ ಸಂದರ್ಭದಲ್ಲಿ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿರುವ ರಾಷ್ಟ್ರೀಯ ಕಬಡ್ಡಿ ಆಟಗಾರ ಹಾಗೂ ಅಂತರರಾಷ್ಟ್ರೀಯ ಹ್ಯಾಂಡ್‌ಬಾಲ್ ಆಟಗಾರ ಶ್ರೀ ಗ್ರೀನಿಡ್ಜ್ ಡಿ. ಕುನ್ಹಾ, ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿ, ಆಟಗಾರರಿಗೆ ಪ್ರೇರಣಾದಾಯಕ ಸಂದೇಶ ನೀಡಿದರು. ಸೋಮವಾರಪೇಟೆಯ ಸೇಂಟ್ ಜೋಸೆಫ್ ಶಿಕ್ಷಣ ಸಂಸ್ಥೆಗಳ ವ್ಯವಸ್ಥಾಪಕರಾದ ರೆವರೆಂಡ್ ಫಾದರ್ ಅವಿನಾಶ್ ಅವರೊಂದಿಗೆ ಟ್ರಯಲ್ಸ್ ಉದ್ಘಾಟನೆ ನೆರವೇರಿತು.

ಆಯ್ಕೆ ಪ್ರಕ್ರಿಯೆಯ ಮೇಲ್ವಿಚಾರಣೆಗೆ, ಗ್ರೀನಿಡ್ಜ್ ಡಿ . ಕುನ್ಹಾ, ಮಡಿಕೇರಿಯ ಫೀಲ್ಡ್ ಮಾರ್ಷಲ್ ಕೆ. ಎಂ. ಕಾರ್ಯಪ್ಪ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ರಮೇಶ್, ಸೋಮವಾರಪೇಟೆಯ BTCG ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಗುರು ಪ್ರಸಾದ್, ಹಾಗೂ ಆತಿಥೇಯ ಸೇಂಟ್ ಜೋಸೆಫ್ ಪದವಿ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಶಿವಕುಮಾರ್ ಕೆ.ಆರ್ ಅವರನ್ನೊಳಗೊಂಡ ಸಮಿತಿಯು ನೇತೃತ್ವ ವಹಿಸಿದ್ದರು.

ವರದಿ:ಅಶೋಕ್ ಮಡಿಕೇರಿ