ಕೊಡಗು ಜಿಲ್ಲಾ ಕುರುಬ ಸಮುದಾಯದ ಮುಖಂಡರೊಂದಿಗೆ ಸಭೆ ನಡೆಸಿದ ಶಾಸಕ ಎಎಸ್ ಪೊನ್ನಣ್ಣ

ವಿರಾಜಪೇಟೆ: ಕೊಡಗು ಜಿಲ್ಲೆಯ ವಿವಿಧ ಭಾಗಗಳಿಂದ ಆಗಮಿಸಿದ ಕುರುಬ ಸಮುದಾಯದ ಪ್ರಮುಖರು, ತಮ್ಮ ಸಮುದಾಯದ ಹಲವು ಬೇಡಿಕೆ ಹಾಗೂ ಸಮಸ್ಯೆಗಳನ್ನು ಮಾನ್ಯ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರೊಂದಿಗೆ ಚರ್ಚಿಸಿದರು.
ಸಮುದಾಯದ ಮುಖಂಡರ ಎಲ್ಲಾ ಮನವಿಗಳನ್ನು ಆಲಿಸಿದ ಶಾಸಕರು, ಮುಂದಿನ ದಿನಗಳಲ್ಲಿ ಸೂಕ್ತ ವ್ಯವಸ್ಥೆ ಕಲ್ಪಿಸಲು ಪ್ರಯತ್ನಿಸುವುದಾಗಿ ಭರವಸೆ ನೀಡಿದರು. ಈ ಸಂದರ್ಭದಲ್ಲಿ ತಿತಿಮತಿ ವಲಯ ಅಧ್ಯಕ್ಷರು ನವೀನ್, ದೇವರಪುರ ವಲಯ ಅಧ್ಯಕ್ಷರು ಬಸ್ ವಂತ್, ಕುರುಬ ಸಮುದಾಯದ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಪ್ರಮುಖರು ಉಪಸ್ಥಿತರಿದ್ದರು.