ರಾಜ್ಯ ಪ್ರೌಢಶಾಲಾ ಪಠ್ಯಕ್ರಮದಲ್ಲಿ ತಿಭಾಷಾ ಸೂತ್ರ ಮುಂದುವರಿಸಲು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ ಕೊಡಗು ಜಿಲ್ಲಾ ಪ್ರೌಢಶಾಲಾ ಹಿಂದಿ ಭಾಷಾ ಶಿಕ್ಷಕರು

ಮಡಿಕೇರಿ:ಕೊಡಗು ಜಿಲ್ಲಾ ಪ್ರೌಢಶಾಲೆಯ ಹಿಂದಿ ಭಾಷಾ ವಿಷಯದ ಶಿಕ್ಷಕರು ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿ, ಕರ್ನಾಟಕ ರಾಜ್ಯದ ಪ್ರೌಢಶಾಲೆಯ ಪಠ್ಯಕ್ರಮದಲ್ಲಿ ಜಾರಿಗೊಳಿಸಲು ಪ್ರಯತ್ನಿಸುತ್ತಿರುವ ದ್ವಿಭಾಷಾ ಸೂತ್ರದ ಬದಲಾಗಿ ತ್ರಿಭಾಷಾ ಸೂತ್ರವನ್ನು ಮುಂದುವರಿಸಬೇಕೆಂಬ ವಿಷಯವನ್ನು ರಾಜ್ಯ ಸರ್ಕಾರದ ಗಮನಕ್ಕೆ ತರಬೇಕೆಂದು ಕೊಡಗ ಜಿಲ್ಲಾಧಿಕಾರಿಗಳಾದ ವೆಂಕಟರಾಜ್ ರವರಿಗೆ ತಿಳಿಸುವ ಮೂಲಕ ಮನವಿ ಸಲ್ಲಿಸಿದರು.ಈ ಸಂದರ್ಭದಲ್ಲಿ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿಗಳಾದ ಮಹೇಂದ್ರ ಎಂಎಸ್,ಜಿಲ್ಲಾ ಹಿಂದಿ ಭಾಷಾ ವಿಷಯ ಸಂಘದ ಅಧ್ಯಕ್ಷರಾದ ಮೆಹಬೂಬ್ ಸಾಬ್, ಕಾರ್ಯದರ್ಶಿಗಳಾದ ಸರ್ವಿನ್ ಡಿಸೋಜ ಮತ್ತು ಶರತ್ ಕುಮಾರ್ ನವೀನ್ ಕುಮಾರ್, ಸಂಘದ ಪದಾಧಿಕಾರಿಗಳು ಹಾಗೂ ಶಿಕ್ಷಕ ಮತ್ತು ಶಿಕ್ಷಕಿಯರು ಉಪಸ್ಥಿತರಿದ್ದರು.