ಮಂಡ್ಯ ವಿರುದ್ಧ 3-0 ಭರ್ಜರಿ ಜಯ; ಸೆಮಿಫೈನಲ್‌ಗೆ ಲಗ್ಗೆ ಇಟ್ಟ ಕೊಡಗು ತಂಡ
ಮಡಿಕೇರಿ:ತುಮಕೂರಿನಲ್ಲಿ ನಡೆಯುತ್ತಿರುವ ಕರ್ನಾಟಕ ರಾಜ್ಯ ಫುಟ್‌ಬಾಲ್ ಸಂಸ್ಥೆ ಆಯೋಜಿಸಿರುವ ಜಿಲ್ಲಾ ಮಟ್ಟದ ಫುಟ್‌ಬಾಲ್ ಟೂರ್ನಿಯಲ್ಲಿ ಕೊಡಗು ಜಿಲ್ಲಾ ತಂಡವು ಮತ್ತೊಂದು ಅದ್ಭುತ ಪ್ರದರ್ಶನ ನೀಡಿ ಮಂಡ್ಯ ತಂಡವನ್ನು 3-0 ಗೋಲುಗಳ ಅಂತರದಿಂದ ಮಣಿಸಿ ಸೆಮಿಫೈನಲ್‌ಗೆ ಭರ್ಜರಿಯಾಗಿ ಪ್ರವೇಶಿಸಿದೆ.
ಪಂದ್ಯದ ಆರಂಭದಿಂದಲೇ ಆಕ್ರಮಣಕಾರಿ ಆಟ ಪ್ರದರ್ಶಿಸಿದ ಕೊಡಗು ತಂಡವು ಮಂಡ್ಯ ತಂಡಕ್ಕೆ ಯಾವುದೇ ಅವಕಾಶ ನೀಡದೆ ಸಂಪೂರ್ಣ ಮೇಲುಗೈ ಸಾಧಿಸಿತು. ತಂಡದ ನಾಯಕ ವಿಜು ಮೊದಲ ಗೋಲು ದಾಖಲಿಸಿ ತಂಡಕ್ಕೆ ಮುನ್ನಡೆ ಒದಗಿಸಿದರು. ನಂತರ ದಿವಾಕರ್ ಮತ್ತು ಸಾಬಿತ್ ತಲಾ ಒಂದು ಗೋಲು ದಾಖಲಿಸಿ ತಂಡದ ಗೆಲುವನ್ನು ಮತ್ತಷ್ಟು ಭದ್ರಪಡಿಸಿದರು.ಸೆಮಿಫೈನಲ್ ಪಂದ್ಯದಲ್ಲಿ ಕೊಡಗು ತಂಡವು ಚಿತ್ರದುರ್ಗ ತಂಡವನ್ನು ಎದುರಿಸಲಿದೆ.
What's Your Reaction?
Like
0
Dislike
0
Love
1
Funny
0
Angry
0
Sad
0
Wow
3

