ಮೈಸೂರು ವಿಭಾಗ ಮಟ್ಟದ ಬಾಲಕಿಯರ ಕ್ರಿಕೆಟ್ ಪಂದ್ಯಾವಳಿಯಲ್ಲಿ ಕೊಡಗು ತಂಡಕ್ಕೆ ದ್ವಿತೀಯ ಸ್ಥಾನ: ವಿರಾಜಪೇಟೆಯ ಪ್ರಗತಿ ಪ್ರೌಢಶಾಲೆಯ ಐವರು ವಿದ್ಯಾರ್ಥಿನಿಯರು ರಾಜ್ಯ ಮಟ್ಟಕ್ಕೆ ಆಯ್ಕೆ
admincoorgdaily

ಮಡಿಕೇರಿ: ಉಡುಪಿ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ,ಉಪನಿರ್ದೇಶಕರ ಕಚೇರಿ ರಜತಾದ್ರಿ ಮಣಿಪಾಲ ಉಡುಪಿ, ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಕುಂದಾಪುರ ಮತ್ತು ಸರ್ಕಾರಿ ಪ್ರೌಢಶಾಲೆ ಹೆಸ್ಕುತ್ತೂರು ಇವರ ಸಹಯೋಗದಲ್ಲಿ ನಡೆದ ಮೈಸೂರು ವಿಭಾಗ ಮಟ್ಟದ 17 ವರ್ಷ ವಯೋಮಾನದ ಬಾಲಕಿಯ ಕ್ರಿಕೆಟ್ ಪಂದ್ಯಾವಳಿಯಲ್ಲಿ ಕೊಡಗು ಬಾಲಕಿಯರ ತಂಡವು ದ್ವಿತೀಯ ಸ್ಥಾನಗಳಿಸಿದೆ.
ಕೊಡಗು ಜಿಲ್ಲಾ ತಂಡವನ್ನು ಪ್ರತಿನಿಧಿಸಿದ್ದ ವಿರಾಜಪೇಟೆಯ ಪ್ರಗತಿ ಪ್ರೌಢಶಾಲೆಯ ಧ್ವಾನಿ ಬಿ.ಆರ್,ಝಕರಿಯ ಸೆಫಿನ್ ವಿ.ಯು,ಸಾನ್ವಿ ಎಸ್.ಭಟ್,ಗನ್ಯಶ್ರೀ ಎಂ.ಜಿ ಹಾಗೂ ವಿನ್ಯಾ ಎನ್‌ಎಸ್ ವಿದ್ಯಾರ್ಥಿನಿಯರು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಕೋಲಾರದಲ್ಲಿ ನಡೆಯಲಿರುವ ರಾಜ್ಯಮಟ್ಟದ ಕ್ರಿಕೆಟ್ ಪಂದ್ಯಾವಳಿಯಲ್ಲಿ ಮೈಸೂರು ವಿಭಾಗದ ತಂಡವನ್ನು ಪ್ರಗತಿಯ ಶಾಲೆಯ ವಿದ್ಯಾರ್ಥಿನಿಯರು ಪ್ರತಿನಿಧಿಸಲಿದ್ದಾರೆ. ವಿದ್ಯಾರ್ಥಿನಿಯರ ಸಾಧನೆಗೆ ಪ್ರಗತಿ ಶಿಕ್ಷಣ ಸಂಸ್ಥೆಯ ಮುಖ್ಯಸ್ಥರಾದ ಮಾದಂಡ ತಿಮ್ಮಯ್ಯ ಅವರು ಅಭಿನಂದನೆ ಸಲ್ಲಿಸಿದ್ದಾರೆ.