ಜು.25 ರಂದು ಕೊಡವ ಭಾಷಾ ಕವಿಗೋಷ್ಠಿ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ

ಜು.25 ರಂದು ಕೊಡವ ಭಾಷಾ ಕವಿಗೋಷ್ಠಿ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ

ಮಡಿಕೇರಿ:ಕನ್ನಡ ಮತ್ತು ಸಂಸ್ಕಂತಿ ಇಲಾಖೆ, ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಮತ್ತು ಪೊನ್ನಂಪೇಟೆ ಕೊಡವ ಸಮಾಜ ಇವರ ವತಿಯಿಂದ ಕೊಡವ ಭಾಷೆಯ ಕವಿಗೋಷ್ಠಿ ಮತ್ತು ಸಾಂಸ್ಕøತಿಕ ಕಾರ್ಯಕ್ರಮವು ಜುಲೈ, 25 ರಂದು ಬೆಳಗ್ಗೆ 10 ಗಂಟೆಗೆ ಪೊನ್ನಂಪೇಟೆ ಕೊಡವ ಸಮಾಜದಲ್ಲಿ ನಡೆಯಲಿದೆ. ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಅಜ್ಜಿನಿಕಂಡ ಸಿ.ಮಹೇಶ್ ನಾಚಯ್ಯ, ಪೊನ್ನಂಪೇಟೆ ಕೊಡವ ಸಮಾಜ ಅಧ್ಯಕ್ಷರಾದ ಕಾಳಿಮಾಡ ಎಂ.ಮೋಟಯ್ಯ, ಅಖಿಲ ಅಮ್ಮ ಕೊಡವ ಸಮಾಜದ ಅಧ್ಯಕ್ಷರಾದ ಬಾನಂಡ ಪ್ರಥ್ಯು, ಪೊನ್ನಂಪೇಟೆ ಕೊಡವ ಸಮಾಜದ ಉಪಾಧ್ಯಕ್ಷರಾದ ಚೆರಿಯಪಂಡ ಇಮ್ಮಿ ಉತ್ತಪ್ಪ, ಕಾನೂರು ಕೋತೂರು ಮಹಿಳಾ ಸಮಾಜದ ಉಪಾಧ್ಯಕ್ಷರಾದ ಚೊಟ್ಟೆಕ್‍ಮಾಡ ಮಧು ರಾಜೀವ್ ಇತರರು ಪಾಲ್ಗೊಳ್ಳಲಿದ್ದಾರೆ.