ಓಬಿಸಿ ಪಟ್ಟಿಗೆ ಕೊಡವರ ಸೇರ್ಪಡೆ ಇಲ್ಲ

ಓಬಿಸಿ ಪಟ್ಟಿಗೆ ಕೊಡವರ ಸೇರ್ಪಡೆ ಇಲ್ಲ

ಮಡಿಕೇರಿ: ಕರ್ನಾಟಕ ರಾಜ್ಯದಲ್ಲಿರುವ ಕೊಡವರು/ ಕೊಡಗರು ಸಮುದಾಯವನ್ನು ಕೇಂದ್ರ ಓಬಿಸಿ ಪಟ್ಟಿಗೆ ಸೇರ್ಪಡೆ ಮಾಡುವ ಪ್ರಸ್ತಾಪ ಇಲ್ಲ ಎಂದು ಕೇಂದ್ರ ಸರಕಾರ ಸ್ಪಷ್ಟನೆ ನೀಡಿದೆ.

ಕೊಡಗು -ಮೈಸೂರು ಲೋಕಸಭಾ ಕ್ಷೇತ್ರದ ಸಂಸದ ಯದುವೀ‌ರ್ ಒಡೆಯ‌ರ್ ಅವರು ಲೋಕಸಭೆಯಲ್ಲಿ ಮಂಗಳವಾರ ಪ್ರಶೋತ್ತರ ಅವಧಿಯಲ್ಲಿ ಈ ವಿಚಾರವನ್ನು ಪ್ರಶ್ನಿಸಿದ್ದರು. ಇದಕ್ಕೆ ಉತ್ತರಿಸಿದ ಕೇಂದ್ರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆಯ ರಾಜ್ಯ ಸಚಿವರಾದ ಬಿ.ಎಲ್. ವರ್ಮ ಅವರು ಉತ್ತರ ನೀಡಿದ್ದಾರೆ.

ಕೇಂದ್ರದ ಎದುರು ಈ ಪ್ರಸ್ತಾಪ ಇಲ್ಲ. ಇದಲ್ಲದೆ ಕರ್ನಾಟಕ ರಾಜ್ಯ ಸರಕಾರದಿಂದಲೂ ಈ ಕುರಿತಾಗಿ ಪ್ರಸ್ತಾವನೆ ಸಲ್ಲಿಕೆಯಾಗಿಲ್ಲ ಎಂದು ಸಚಿವರು ಯದುವೀರ್ ಅವರ ಪ್ರಶ್ನೆಗೆ ಸ್ಪಷ್ಟನೆ ನೀಡಿದ್ದಾರೆ.