Kodagu

ಕೊಡ್ಲಿಪೇಟೆ: ಮೀನು ಹಿಡಿಯಲು ಹೋದ ಇಬ್ಬರು ನಾಪತ್ತೆ

admincoorgdaily

ಕೊಡ್ಲಿಪೇಟೆ: ಮೀನು ಹಿಡಿಯಲು ಹೋದ ಇಬ್ಬರು ನಾಪತ್ತೆ

ಕೊಡ್ಲಿಪೇಟೆ: ಮೀನು ಹಿಡಿಯಲು ತೆರಳಿದ್ದ ಇಬ್ಬರು ಯುವಕರು ನಾಪತ್ತೆಯಾಗಿರುವ ಘಟನೆ ಕೊಡ್ಲಿಪೇಟೆ ಹೋಬಳಿಯ ನೀರುಗುಂದ ಗ್ರಾಮದಲ್ಲಿ ನಡೆದಿದೆ. ಸ್ಥಳೀಯ ನಿವಾಸಿಗಳಾದ ನಾಗರಾಜ್ ಮತ್ತು ಶಿವರಾಜ್ ಅವರು ತಡರಾತ್ರಿ ಮೀನು ಹಿಡಿಯಲು ಸಮೀಪದ ಹೊಳೆಗೆ ತೆರಳಿದ್ದರು.

ಬಳಿಕ ಇಬ್ಬರೂ ವಾಪಸ್ ಮನೆಗೆ ಬಾರದ ಹಿನ್ನೆಲೆಯಲ್ಲಿ ಮನೆಯವರು ಆತಂಕಗೊಂಡು ಹುಡುಕಾಟ ನಡೆಸಿದ್ದಾರೆ. ಈ ಸಂಬಂಧ ಶನಿವಾರಸಂತೆ ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸ್ಥಳೀಯರ ಸಹಕಾರದೊಂದಿಗೆ ನಾಪತ್ತೆಯಾದವರಿಗಾಗಿ ಶೋಧ ಕಾರ್ಯ ಮುಂದುವರೆದಿದೆ.