2026ರ ಏಪ್ರಿಲ್ 10ರಿಂದ14ವರೆಗೆ ಕೊಂಡಂಗೇರಿ ಮಖಾಂ ಉರೂಸ್
ವರದಿ:ಝಕರಿಯ ನಾಪೋಕ್ಲು
ನಾಪೋಕ್ಲು :ಇತಿಹಾಸ ಪ್ರಸಿದ್ಧ ಕೊಂಡಂಗೇರಿ ದರ್ಗಾದಲ್ಲಿ ಅಂತ್ಯ ವಿಶ್ರಾಂತಿ ಪಡೆಯುತ್ತಿರುವ ಅಬ್ದುಲ್ಲಾಹಿ ಅಸ್ಸಖಾಫ್ ಅಳ್‌ರಮಿ ಹಾಗೂಇತರ ಮಹಾನುಭಾವರ ಹೆಸರಿನಲ್ಲಿ ಪ್ರತಿವರ್ಷ ಆಚರಿಸಿಕೊಂಡು ಬರುತ್ತಿರುವ ಉರೂಸ್ ಸಮಾರಂಭವು 2026ರ ಏಪ್ರಿಲ್ 10ರಿಂದ14 ರವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಆಚರಿಸಲು ತೀರ್ಮಾನಿಸಲಾಗಿದೆ ಎಂದು ಕೊಂಡಂಗೇರಿ ಸುನ್ನಿ ಮುಸ್ಲಿಂ ಜಮಾಅತ್ ಆಡಳಿತ ಮಂಡಳಿ ಪದಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.