ಮದರಸ ಪಬ್ಲಿಕ್ ಪರೀಕ್ಷೆಯಲ್ಲಿ ಕೊಟ್ಟಮುಡಿ ಮರ್ಕಝ್ ವಿದ್ಯಾರ್ಥಿನಿ ರಈಸಾ ಜಿಲ್ಲೆಗೆ ಪ್ರಥಮ
admincoorgdaily

ವರದಿ :ಝಕರಿಯ ನಾಪೋಕ್ಲು
ನಾಪೋಕ್ಲು : ಇಸ್ಲಾಮಿಕ್ ಎಜುಕೇಶನಲ್ ಬೋರ್ಡ್ ಆಫ್ ಇಂಡಿಯಾ 2026ನೇ ಸಾಲಿನ 10ನೇ ತರಗತಿಯ ಆಂಗ್ಲ ಮಾಧ್ಯಮ ಮದರಸ ಪಬ್ಲಿಕ್ ಪರೀಕ್ಷೆಯಲ್ಲಿ ಕೆ.ಆರ್. ರಈಸಾ ಕೊಡಗು ಜಿಲ್ಲೆಗೆ ಪ್ರಥಮ ಸ್ಥಾನ ಪಡೆದು ಸಾಧನೆ ಮಾಡಿದ್ದಾಳೆ.
ನಾಪೋಕ್ಲು ಬಳಿಯ ಕೊಟ್ಟಮುಡಿ ಮರ್ಕಝುಲ್ ಹಿದಾಯ ಮದರಸ ವಿದ್ಯಾರ್ಥಿನಿಯಾಗಿರುವ ರಈಸಾ 10ನೇ ತರಗತಿ ಮದರಸ ಆಂಗ್ಲ ಮಾಧ್ಯಮ ವಿಭಾಗದ ಪಬ್ಲಿಕ್ ಪರೀಕ್ಷೆಯಲ್ಲಿ 300ಕ್ಕೆ300 ಅಂಕ ಪಡೆದು ಜಿಲ್ಲೆಗೆ ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದಾಳೆ.
ರಈಸಾ ಎಡಪಾಲ ಕಿಕ್ಕರೆ ಗ್ರಾಮದ ನಿವಾಸಿ ಮದರಸ ಅಧ್ಯಾಪಕರಾದ ಅಬ್ದುಲ್ ರಶೀದ್ ಮುಸ್ಲಿಯಾರ್ ಹಾಗೂ ಫಾತಿಮಾ ದಂಪತಿಗಳ ಪುತ್ರಿಯಾಗಿದ್ದಾಳೆ.
ಇಸ್ಲಾಮಿಕ್ ಎಜುಕೇಶನಲ್ ಬೋರ್ಡ್ ಆಫ್ ಇಂಡಿಯಾ ಮದರಸ ಆಂಗ್ಲಮಾಧ್ಯಮ ಪಬ್ಲಿಕ್ ಪರೀಕ್ಷೆಯಲ್ಲಿ ಕೊಟ್ಟಮುಡಿ ಮರ್ಕಝುಲ್ ಹಿದಾಯ ಮದರಸದ ಎಲ್ಲಾ ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇ100ರಷ್ಟು ಫಲಿತಾಂಶವನ್ನು ಪಡೆದುಕೊಂಡಿದೆ.