ಕೂಡಿಗೆ ಡಯಟ್ ಸಂಸ್ಥೆ: ನಿವೃತ್ತಿಗೊಂಡ ಪ್ರಾಂಶುಪಾಲ ಚಂದ್ರಕಾಂತ್ ಅವರಿಗೆ ಸಂಸ್ಥೆ ವತಿಯಿಂದ ಆತ್ಮೀಯ ಬೀಳ್ಕೊಡುಗೆ
ಕುಶಾಲನಗರ:ಕುಶಾಲನಗರ ತಾಲ್ಲೂಕಿನ ಕೂಡಿಗೆಯ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ (ಡಯಟ್) ಯಲ್ಲಿ ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ (ಅಭಿವೃದ್ಧಿ) ರೂ ಆಗಿ ಜುಲೈ ಅಂತ್ಯಕ್ಕೆ ಸೇವಾ ನಿವೃತ್ತಿ ಹೊಂದಿದ ಪ್ರಾಂಶುಪಾಲ ಎಂ.ಚಂದ್ರಕಾಂತ್ ಅವರಿಗೆ ಡಯಟ್ ಸಂಸ್ಥೆಯ ವತಿಯಿಂದ ಆತ್ಮೀಯವಾಗಿ ಬೀಳ್ಕೊಡಲಾಯಿತು. ಡಯಟ್ ಸಂಸ್ಥೆಯ ಅಧಿಕಾರಿಗಳು, ಕಛೇರಿಯ ಸಿಬ್ಬಂದಿ ಹಾಗೂ ಪ್ರಶಿಕ್ಷಣಾರ್ಥಿಗಳ ವತಿಯಿಂದ ಏರ್ಪಡಿಸಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ ನಿವೃತ್ತಿಗೊಂಡ ಪ್ರಾಂಶುಪಾಲ ಚಂದ್ರಕಾಂತ್ ಅವರನ್ನು ಸನ್ಮಾನಿಸಿ ಗೌರವಿಸಿ ನೆನಪಿನ ಕಾಣಿಕೆ ನೀಡಲಾಯಿತು.
ಸಂಸ್ಥೆಯ ವತಿಯಿಂದ ನೀಡಿದ ಸನ್ಮಾನ ಸ್ವೀಕರಿಸಿ ಮಾತನಾಡಿದ ಪ್ರಾಂಶುಪಾಲ ಎಂ.ಚಂದ್ರಕಾಂತ್ , ಸನ್ಮಾನ ಸ್ವೀಕರಿಸಿ ಮಾತನಾಡಿದ ಪ್ರಾಂಶುಪಾಲ ಎಂ.ಚಂದ್ರಕಾಂತ್, ತಾವುಗಳು ಶಿಕ್ಷಣ ಇಲಾಖೆಯ ವಿವಿಧ ಸ್ತರದ ಹುದ್ದೆಗಳ ಜತೆಗೆ ಈ ಡಯಟ್ ಸಂಸ್ಥೆಯಲ್ಲಿ 2 ವರ್ಷಗಳ ಕಾಲ ಪ್ರಾಂಶುಪಾಲರಾಗಿ ಉತ್ತಮ ಸೇವೆ ಸಲ್ಲಿಸಲು ಹಾಗೂ ಜಿಲ್ಲೆಯಲ್ಲಿ ಉತ್ತಮ ಶೈಕ್ಷಣಿಕ ಚಟುವಟಿಕೆಗಳನ್ನು ನಡೆಸಲು ಸಹಕರಿಸಿದ್ದಕ್ಕೆ ಕೃತಜ್ಞತೆ ಸಲ್ಲಿಸಿದರು. ಜಿಲ್ಲೆಯಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶವನ್ನು ವೃದ್ಧಿಸಲು ಹಾಗೂ 2024 ನೇ ಜನವರಿಯಲ್ಲಿ ಜಿಲ್ಲೆಯಲ್ಲಿ ನಡೆದ ಶಾಲಾ ಮಕ್ಕಳ ರಾಷ್ಟ್ರೀಯ ಹಾಕಿ ಟೂರ್ನಿಯನ್ನು ಯಶಸ್ವಿಯಾಗಿ ಸಂಘಟಿಸಲು ಶಿಕ್ಷಣ ಇಲಾಖೆಯ ಅಧಿಕಾರಿಗಳು ಮತ್ತು ಶಿಕ್ಷಕ ವೃಂದ ಹಾಗೂ ಜಿಲ್ಲೆಯ ಕ್ರೀಡಾಭಿಮಾನಿಗಳು ನೀಡಿದ ಸಹಕಾರ ಅವಿಸ್ಮರಣೀಯವಾದುದು ಎಂದರು.
ಅಭಿನಂದನಾ ಭಾಷಣ ಮಾಡಿದ ಜಿಲ್ಲಾ ಅಕ್ಷರ ದಾಸೋಹ ಯೋಜನೆಯ ಶಿಕ್ಷಣಾಧಿಕಾರಿ ಹೇಮಂತ್ ರಾಜ್ , ಡಯಟ್ ಸಂಸ್ಥೆಯ ಕಾರ್ಯಭಾರದೊಂದಿಗೆ ಜಿಲ್ಲಾ ಡಿಡಿಪಿಐ ಆಗಿ ಹೆಚ್ಚುವರಿಯಾಗಿ ಸೇವೆ ಸಲ್ಲಿಸಿದ ಪ್ರಾಂಶುಪಾಲರಾದ ಚಂದ್ರಕಾಂತ್ ಅವರು 2024 ನೇ ಸಾಲಿನ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ ಯಲ್ಲಿ ರಾಜ್ಯದಲ್ಲಿ ಜಿಲ್ಲೆಗೆ ನಾಲ್ಕನೇ ಸ್ಥಾನ ಗಳಿಸುವುದರೊಂದಿಗೆ ರಾಜ್ಯದಲ್ಲಿ ಎಸ್ಸೆಸ್ಸೆಲ್ಸಿ ಗುಣಮಟ್ಟದ ಫಲಿತಾಂಶ ಗಳಿಸುವಲ್ಲಿ ಕೊಡಗು ಜಿಲ್ಲೆಯು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದು ಉತ್ತಮ ಶೈಕ್ಷಣಿಕ ಸಾಧನೆ ಮಾಡುವಲ್ಲಿ ಯಶಸ್ವಿಯಾಗಿರುವುದು ಹೆಮ್ಮೆಯ ಸಂಗತಿ ಎಂದರು.
ಸಂಸ್ಥೆಯ ಹಿರಿಯ ಉಪನ್ಯಾಸಕಿ ಬಿ.ಎನ್.ಪುಷ್ಪ ಮಾತನಾಡಿ, ಕ್ರಿಯಾಶೀಲ ವ್ಯಕ್ತಿತ್ವ ಹೊಂದಿರುವ ಪ್ರಾಂಶುಪಾಲರಾದ ಚಂದ್ರಕಾಂತ್ ಅವರು, ಸಂಸ್ಥೆಯ ಪ್ರಾಂಶುಪಾಲರಾದ ಚಂದ್ರಕಾಂತ್ ಅವರು, ಜಿಲ್ಲೆಯ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ ಜತೆಗೆ ಶಿಕ್ಷಕರ ತರಬೇತಿ ಕಾರ್ಯಗಳು ಸೇರಿದಂತೆ ಸಂಸ್ಥೆಯ ಏಳ್ಗೆಗೆ ತಮ್ಮನ್ನು ತೊಡಗಿಸಿಕೊಂಡಿದ್ದರು ಎಂದರು. ಸಂಸ್ಥೆಯ ಹಿರಿಯ ಉಪನ್ಯಾಸಕಿ ಗೀತಾ ಮಾತನಾಡಿ, ಸಂಸ್ಥೆಯ ಪ್ರಾಂಶುಪಾಲರಾದ ಚಂದ್ರಕಾಂತ್ ಅವರು,ಸಂಸ್ಥೆಯ ಅಧಿಕಾರಿಗಳು, ವಿದ್ಯಾರ್ಥಿ ವೃಂದ ಹಾಗೂ ಸಿಬ್ಬಂದಿಗಳ ಪ್ರೀತಿಗೆ ಪಾತ್ರರಾಗಿದ್ದಾರೆ ಎಂದರು.
ಹಿರಿಯ ಉಪನ್ಯಾಸಕ ಎನ್.ವಿ.ಸ್ವಾಮಿ, ಉಪನ್ಯಾಸಕರಾದ ವಿ.ವಿಜಯ್, ಕೆ.ಎಸ್.ನಳಿನಾಕ್ಷಿ,ಪಿ.ಪಿ.ಗಾಯತ್ರಿ, ಎಂ.ಲತಾ ತಮ್ಮ ಅನಿಸಿಕೆ ವ್ಯಕ್ತಪಡಿಸಿದರು. ಸೋಮವಾರಪೇಟೆ ಬಿಇಓ ಎಸ್.ಭಾಗ್ಯಮ್ಮ, ಸುಳ್ಯ ಬಿಇಓ ಎಂ.ಕೃಷ್ಣಪ್ಪ, ಹುಣಸೂರು ಬಿಇಓ ಎಸ್.ಪಿ.ಮಹಾದೇವ, ನಿವೃತ್ತ ಬಿಇಓ ಶಿವಣ್ಣ,ಆಲೂರು ಅಕ್ಷರ ದಾಸೋಹ ಯೋಜನೆಯ ಅಧಿಕಾರಿ ಸಿದ್ದೇಶ್ ಕುಮಾರ್, ಡಾ ಸದಾಶಿವಯ್ಯ ಎಸ್ ಪಲ್ಲೇದ್, ಪ್ರೌಢಶಾಲಾ ಶಿಕ್ಷಕರ ಸಂಘಟನೆಯ ಪ್ರಮುಖರಾದ ಪಿ.ನವೀನ್ ಕುಮಾರ್, ಎಂ.ಟಿ.ದಯಾನಂದ ಪ್ರಕಾಶ್, ಟಿ.ವಿ.ಶೈಲಾ, ತಾಲ್ಲೂಕು ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಸೋಮಯ್ಯ, ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್, ಸಿ ಆರ್ ಪಿ ಕೆ.ಶಾಂತಕುಮಾರ್, ವಿವಿಧ ಶಾಲಾ ಮುಖ್ಯ ಶಿಕ್ಷಕರು, ಶಿಕ್ಷಕರು, ಡಯಟ್ ಸಂಸ್ಥೆಯ ಸಿಬ್ಬಂದಿ ಸೇರಿ ಪ್ರಾಂಶುಪಾಲರಾದ ಚಂದ್ರಕಾಂತ್ ಅವರನ್ನು ಅಭಿನಂದಿಸಿ ಗೌರವಿಸಿದರು.
ಸಂಸ್ಥೆಯಲ್ಲಿನ ಸೇವಾವಧಿಯ ದಿನಗಳು ಮತ್ತು ಉಪನ್ಯಾಸಕರು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳೊಂದಿಗೆ ಹೊಂದಿದ ಪ್ರೀತಿ- ವಿಶ್ವಾಸದ ಒಡನಾಟವನ್ನು ಮೆಲುಕು ಹಾಕಿದ ಪ್ರಾಂಶುಪಾಲರಾದ ಎಂ ಚಂದ್ರಕಾಂತ್, ಡಯಟ್ ಸಂಸ್ಥೆಯು ಜಿಲ್ಲಾ ಶೈಕ್ಷಣಿಕ ಚಟುವಟಿಕೆಗಳ ಕೇಂದ್ರವಾಗಿದ್ದು, ಶಿಕ್ಷಕರು ತರಬೇತಿ ಪಡೆದು ತಮ್ಮ ಜ್ಞಾನ ವೃದ್ಧಿಸಲು ಸಹಕಾರಿಯಾಗಿದೆ. ಸಂಸ್ಥೆಯ ಅಧೀಕ್ಷಕಿ ಭವಿ ಪೊನ್ನಪ್ಪ, ಜಿ.ಟಿ.ಜಯಂತಿ, ಸಿಬ್ಬಂದಿ ಹಾಗೂ ಪ್ರಶಿಕ್ಷಣಾರ್ಥಿಗಳು ಇದ್ದರು.