ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಗೆ ಎಸ್.ಎಸ್.ಎಲ್‌.ಸಿ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ

Apr 25, 2026 - 02:08
 0  320
ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಗೆ ಎಸ್.ಎಸ್.ಎಲ್‌.ಸಿ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ

ಕುಶಾಲನಗರ, ಏ.24: ಕುಶಾಲನಗರ ತಾಲ್ಲೂಕಿನ ಕೂಡುಮಂಗಳೂರು(ಕೂಡ್ಲೂರು) ಸರ್ಕಾರಿ ಪ್ರೌಢಶಾಲೆಗೆ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ಬಂದಿದ್ದು, ಈ ಶಾಲೆಯ ಮೂವರು ವಿದ್ಯಾರ್ಥಿನಿಯರು ಅತ್ಯುನ್ನತ( ಡಿಸ್ಟಿಂಕ್ಷನ್ ) ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ.

 ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಯಲ್ಲಿ 625 ಅಂಕಗಳಿಗೆ ವಿದ್ಯಾರ್ಥಿನಿಗಳಾದ ಬಿ.ದಿಶಾ, 593 ಅಂಕಗಳಿಗೆ ಶೇ.,95, ಜೆ.ರಂಜಿತ,‌552 ಅಂಕಗಳಿಗೆ ಶೇ.88.32% ಹಾಗೂ ಬಿ.ವೈ.ಭೂಮಿಕಾ, 545 ಅಂಕಗಳಿಗೆ ಶೇ.87.8 % ಫಲಿತಾಂಶ ಗಳಿಸಿ ಈ ಮೂವರು ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದು, ಗ್ರಾಮಾಂತರ ಪ್ರದೇಶದ ಶಾಲೆಗೆ ಕೀರ್ತಿ ತಂದಿರುವುದಕ್ಕೆ ಶಾಲಾ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ಮತ್ತು ಶಿಕ್ಷಕ ವೃಂದ ಅಭಿನಂದನೆ ಸಲ್ಲಿಸಿದ್ದಾರೆ.

 ಪರೀಕ್ಷೆ ಬರೆದ 30 ವಿದ್ಯಾರ್ಥಿಗಳ ಪೈಕಿ ಮೂವರು ವಿದ್ಯಾರ್ಥಿನಿಯರು ಅತ್ಯುನ್ನತ ಶ್ರೇಣಿ, 26 ಮಂದಿ ಪ್ರಥಮ ದರ್ಜೆ ಹಾಗೂ ಓರ್ವ ವಿದ್ಯಾರ್ಥಿನಿಯು ದ್ವಿತೀಯ ದರ್ಜೆಯಲ್ಲಿ ತೇರ್ಗಡೆ ಹೊಂದಿರುತ್ತಾರೆ.

What's Your Reaction?

Like Like 0
Dislike Dislike 1
Love Love 0
Funny Funny 0
Angry Angry 0
Sad Sad 0
Wow Wow 1