ಕುಶಾಲನಗರ: ಕರ್ನಾಟಕದಲ್ಲಿ ದ್ವಿಭಾಷಾ ಶಿಕ್ಷಣ ನೀತಿ ಜಾರಿಗೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆಯಿಂದ ಪ್ರತಿಭಟನೆ

ಕುಶಾಲನಗರ:ಕರ್ನಾಟಕದಲ್ಲಿ ದ್ವಿಭಾಷಾ ಶಿಕ್ಷಣ ನೀತಿಯನ್ನು ಜಾರಿಗೆ ಆಗ್ರಹಿಸಿಕರ್ನಾಟಕ ರಕ್ಷಣಾ ವೇದಿಕೆಯ ಕೊಡಗು ಜಿಲ್ಲಾಧ್ಯಕ್ಷರಾದ ದೀಪಕ್ ಕನ್ನಡಿಗ ನೇತೃತ್ವದಲ್ಲಿ ಕರವೇ ಇಂದು ಕುಶಾಲನಗರ ತಹಶೀಲ್ದಾರ್ ಕಛೇರಿ ಮುಂಭಾಗ ಪ್ರತಿಭಟನೆ ನಡೆಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ರವರಿಗೆ ಉಪತಶೀಲ್ದಾರ್ ಅನಿತಾ ಮೂಲಕ ಮನವಿ ಪತ್ರವನ್ನು ಸಲ್ಲಿಸಿದರು.
ಈ ಸಂದರ್ಭ ರಾಜ್ಯ ಸಂಚಾಲಕರಾದ ದೀಪಾ ಪೂಜಾರಿ, ಮಹಿಳಾ ಜಿಲ್ಲಾಧ್ಯಕ್ಷೆ ಸಂಧ್ಯಾಗಣೇಶ್, ತಾಲ್ಲೂಕು ಅಧ್ಯಕ್ಷರಾದ ಅಣ್ಣಯ್ಯ, ಮಹಿಳಾ ತಾಲ್ಲೂಕು ಅಧ್ಯಕ್ಷೆ ರೂಪಾ ಗಣೇಶ್, ಯುವ ಘಟಕದ ಅಧ್ಯಕ್ಷರಾದ ವಸಂತ್ ಆಚಾರ್ಯ, ಕುಶಾಲನಗರ ಗೌರವಾಧ್ಯಕ್ಷರಾದ ರೊನಾಲ್ಡ್, ಎಲ್ಲಾ ಘಟಕಗಳ ಕಾರ್ಯದರ್ಶಿಗಳರಾದ ಶೃತಿ ಗಿರೀಶ್, ರವೀಶ್, ಕುಮಾರ್ ದೇವಾಂಗ, ಶೈಲಾ ದೇವಾಂಗ ಎಲ್ಲಾ ಘಟಕದ ಪದಾಧಿಕಾರಿಗಳು ಭಾಗವಹಿಸಿದ್ದರು.
What's Your Reaction?






