ಕುಶಾಲನಗರ: ಆನೆಕಾಡು ಬಳಿ ರಸ್ತೆ ಅಪಘಾತ ಬೈಕ್ ಸವಾರ ಸಾವು

ಕುಶಾಲನಗರ: ಆನೆಕಾಡು ಬಳಿ ರಸ್ತೆ ಅಪಘಾತ ಬೈಕ್ ಸವಾರ ಸಾವು

ಕುಶಾಲನಗರ:ರಾಷ್ಟ್ರೀಯ ಹೆದ್ದಾರಿ 275ರ ಆನೆಕಾಡು ಬಳಿ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ, ಸುಳ್ಯ‌ ಸಮೀಪದ ಪೆರುವಾಜೆ ಬೆಳ್ಳಾರೆಯ ಕಾತಿ೯ಕ್ ಭಟ್ (30)ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಮಡಿಕೇರಿಯಿಂದ ಕುಸಾಲನಗರಕ್ಕೆ ತೆರಳುತ್ತಿದ್ದ ಕಾರು,ಚಾಲಕನ ನಿಯಂತ್ರಣ ತಪ್ಪಿ ಎದುರಿನಿಂದ ಬರುತ್ತಿದ್ದ ಬೈಕ್ ಗೆ ಡಿಕ್ಕಿಯಾಗಿದೆ. ಡಿಕ್ಕಿಯಾದ ರಭಸಕ್ಕೆ ಬೈಕ್ ಸವಾರ ಸ್ಥಳದಲ್ಲಿಯೇ ಕೊನೆಯುಸಿರೆಳೆದಿದ್ದಾನೆ.