ಕುಶಾಲನಗರ : ಮತದಾರರ ಪಟ್ಟಿ ಪರಿಷ್ಕರಣೆ ಕುರಿತ ಜಾಗೃತಿ ಜಾಥಾಗೆ ಜಿಲ್ಲಾಧಿಕಾರಿ ಸೋಮಶೇಖರ್ ಚಾಲನೆ

Jul 15, 2026 - 11:55
 0  53
ಕುಶಾಲನಗರ : ಮತದಾರರ ಪಟ್ಟಿ ಪರಿಷ್ಕರಣೆ  ಕುರಿತ ಜಾಗೃತಿ ಜಾಥಾಗೆ ಜಿಲ್ಲಾಧಿಕಾರಿ ಸೋಮಶೇಖರ್ ಚಾಲನೆ

ಕುಶಾಲನಗರ : ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ವಿಶೇಷ ಅಭಿಯಾನ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಅರಿವು ಮೂಡಿಸುವ ಸಂಬಂಧ ಇಲ್ಲಿನ ಪುರಸಭೆ ಆಶ್ರಯದಲ್ಲಿ ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಪಟ್ಟಣದಲ್ಲಿ ಆಯೋಜಿಸಿದ್ದ ವಿಶೇಷ ಜಾಗೃತಿ ಜಾಥಾ ನಡೆಯಿತು. ಪಟ್ಟಣದ ಬೈಚನಹಳ್ಳಿ ಬಳಿ ಜಿಲ್ಲಾಧಿಕಾರಿ ಸೋಮಶೇಖರ್ ಅವರು ಜಾಥಾಕ್ಕೆ ಚಾಲನೆ ನೀಡಿ,ಎಸ್.ಐ.ಆರ್.ಸಂಬಂಧಿಸಿದ ಮಾಹಿತಿಯುಳ್ಳ ಕರಪತ್ರ ಬಿಡುಗಡೆಗೊಳಿಸಿ ಪ್ರದರ್ಶಿಸಿದರು.

 ಈ ಸಂದರ್ಭ ಮಾತನಾಡಿದ ಅವರು, ಅರ್ಹರು ಮತದಾನ‌ ಹಕ್ಕಿನಿಂದ ವಂಚಿತರಾಗಬಾರದು. ಅನರ್ಹರನ್ನು ಪತ್ತೆ ಹಚ್ಚಿ ಹೊರಗಿಡುವ ಕಾರ್ಯ ಈ ಮೂಲಕ ನಡೆಯುತ್ತಿದೆ. ಮತದಾರರು ತಮ್ಮ ಹಕ್ಕಿನಿಂದ ವಂಚಿತರಾಗದಂತೆ ಎಸ್.ಐ.ಆರ್.ಫಾರಂ ಭರ್ತಿ ಮಾಡಿ ಸಕಾಲಕ್ಕೆ ಸಲ್ಲಿಕೆ ಮಾಡಬೇಕು ಎಂದು ಸೂಚಿನೆ ನೀಡಿದರು.

ಬೈಚನಹಳ್ಳಿ ಮಾರಿಯಮ್ಮ ದೇವಾಲಯ ಬಳಿಯಿಂದ ಮುಖ್ಯರಸ್ತೆಯ ಮೂಲಕ ಪುರಸಭಾ ಕಚೇರಿ ತನಕ ಜಾಥಾ ಸಾಗಿ ಬಂತು.ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಆಶಾ ಕಾರ್ಯಕರ್ತರು, ಪುರಸಭೆ ಸಿಬ್ಬಂದಿ ವರ್ಗ, ಶಾಲಾ ಕಾಲೇಜು ವಿದ್ಯಾರ್ಥಿಗಳು ಜಾಥಾದಲ್ಲಿ ಪಾಲ್ಗೊಂಡು ಸಾರ್ವಜನಿಕರಿಗೆ ಘೋಷಣಾ ಫಲಕಗಳನ್ನು ಪ್ರದರ್ಶಿಸಿ ಜಾಗೃತಿ ಮೂಡಿಸಿದರು.

ಈ ಸಂದರ್ಭ ಕೊಡಗು ವೃತ್ತ ಅರಣ್ಯ ಸಂರಕ್ಷಣಾಧಿಕಾರಿ ಸೋನಾಲ್ ವೃಷ್ಠಿ, ಡಿಎಫ್ಒ ಅಭಿಷೇಕ್, ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆನಂದ್ ಪ್ರಕಾಶ್ ಮೀನಾ, ಸಮಾಜ ಕಲ್ಯಾಣಾಧಿಕಾರಿ ಶೇಖರ್, ತಹಸೀಲ್ದಾರ್ ಕೃಷ್ಣಮೂರ್ತಿ, ಪುರಸಭೆ ಮುಖ್ಯಾಧಿಕಾರಿ ಟಿ.ಎಸ್.ಗಿರೀಶ್ ಸೇರಿದಂತೆ ಅಧಿಕಾರಿಗಳು ಭಾಗವಹಿಸಿದ್ದರು

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0