ಕುಶಾಲನಗರ:ದ್ವಿಚಕ್ರ ವಾಹನ ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ ಮಾಜಿ ಯೋಧ ಸಾವು

Aug 5, 2026 - 17:34
 0  380
ಕುಶಾಲನಗರ:ದ್ವಿಚಕ್ರ ವಾಹನ ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ ಮಾಜಿ ಯೋಧ ಸಾವು

ಕುಶಾಲನಗರ, ಆ.5 : ಕುಶಾಲನಗರ ಸಮೀಪದ ಗುಡ್ಡೆಹೊಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಆ.1 ರಂದು ನಡೆದ ಅಪಘಾತದಲ್ಲಿ ತಲೆಗೆ ತೀವ್ರ ಪೆಟ್ಟು ಬಿದ್ದು ಮೈಸೂರಿನ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಗಂಧದಕೋಟಿ ನಿವಾಸಿ, ಮಾಜಿ ಯೋಧ ಸಿ. ಎಸ್. ಮಿಟ್ಟು ಇಂದು ಮುಂಜಾನೆ ಆಸ್ಪತ್ರೆಯಲ್ಲಿ ಅಸುನೀಗಿದ್ದಾರೆ. ಇವರು ನಿವೃತ್ತಿಯ ನಂತರ ಖಾಸಗಿ ಬ್ಯಾಂಕಿನಲ್ಲಿ ಸೇವೆಯಲ್ಲಿದ್ದರು. ಮೃತರು ಪತ್ನಿ, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಪ್ರಕರಣ ಕುಶಾಲನಗರ ಸಂಚಾರಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0