ಕುಶಾಲನಗರ;ವಿದೇಶದಲ್ಲಿ ಕೆಲಸ ಕೊಡಿಸುವುದಾಗಿ ವಂಚನೆ ಆರೋಪ
ಮಡಿಕೇರಿ: ವಿದೇಶದಲ್ಲಿ ಕೆಲಸ ಕೊಡಿಸುವುದಾಗಿ ಆಮಿಷ ತೋರಿಸಿ ಹಣ ಪಡೆದ ವ್ಯಕ್ತಿ ವಾಪಸು ಹಣ ಕೇಳಲು ಹೋದಾಗ ತೀವ್ರ ಹಲ್ಲೆ ನಡೆಸಿದ ಪ್ರಕರಣ ಕುಶಾಲನಗರದಲ್ಲಿ ನಡೆದಿದೆ. ನಿಂಗೇಗೌಡ ಬಡಾವಣೆಯ ನಿವಾಸಿ ಅಬ್ದುಲ್ ಅಜೀಜ್ ಎಂಬವರು ತೀವ್ರ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದಾರೆ.
ಹಲ್ಲೆ ಮಾಡಿದ ಆರೋಪಿ ಗಂಧದಕೋಟೆ ನಿವಾಸಿ ಅಬ್ದುಲ್ ಪಿ.ಎಂ. ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದು ಕ್ರಮ ಕೈಗೊಂಡಿದ್ದಾರೆ. ಪಿ.ಎಂ. ಅಬ್ದುಲ್ ವಿದೇಶದಲ್ಲಿ ಕೆಲಸ ಕೊಡಿಸುವುದಾಗಿ ಅಬ್ದುಲ್ ಅಜೀಜ್ ಅವರಿಂದ ಹಣ ಪಡೆದು ವಂಚಿಸಿರುವುದಾಗಿ ಲಿಂಗೇಗೌಡ ಬಡಾವಣೆಯ ಅಬ್ದುಲ್ ಅಜೀಜ್ ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಹಣ ವಾಪಸು ಪಡೆಯಲು ಹೋದಾಗ ತನಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ತನ್ನ ಮೇಲೆ ತೀವ್ರವಾಗಿ ಹಲ್ಲೆ ನಡೆಸಿರುವುದಾಗಿ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ಅಬ್ದುಲ್ ಅಜೀಜ್ ಮಡಿಕೇರಿಯಲ್ಲಿ ಚಿಕಿತ್ಸೆ ಪಡೆದು ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ ದಾಖಲಾಗಿದ್ದಾರೆ. ಕುಶಾಲನಗರ ಟೌನ್ ಪೊಲೀಸರು ಮಹಜರು ನಡೆಸಿ ಆರೋಪಿಯ ಮೇಲೆ ಕ್ರಮ ಕೈಗೊಂಡಿದ್ದಾರೆ.