ಕುಶಾಲನಗರ: ಸರ್ಕಾರಿ ಪಾಲಿಟೆಕ್ನಿಕ್‌ನಲ್ಲಿ ನೂತನ ಕಟ್ಟಡ ಉದ್ಘಾಟನೆ
admincoorgdaily

ಕುಶಾಲನಗರ:ಸರ್ಕಾರಿ ಪಾಲಿಟೆಕ್ನಿಕ್‌ನಲ್ಲಿ ನೂತನ ಕಟ್ಟಡದ ಉದ್ಘಾಟನೆಯನ್ನು ಶಾಸಕ ಡಾ.ಮಂತರ್ ಗೌಡ ಅವರು ನೆರವೇರಿಸಿದರು.
ನೂತನ ಕಟ್ಟಡವು ಆಧುನಿಕ ಸೌಲಭ್ಯಗಳೊಂದಿಗೆ ನಿರ್ಮಾಣವಾಗಿದ್ದು, ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡುವ ನಿಟ್ಟಿನಲ್ಲಿ ಸಹಕಾರಿಯಾಗಲಿದೆ. ಕೌಶಲ್ಯ ಅಭಿವೃದ್ಧಿಗೆ ಹೊಸ ಅವಕಾಶಗಳನ್ನು ತೆರೆದುಕೊಡಲಿರುವ ಈ ಕಟ್ಟಡವು ಪ್ರದೇಶದ ಯುವಕರಿಗೆ ಉಜ್ವಲ ಭವಿಷ್ಯದ ದಾರಿಯಾಗಲಿದೆ ಎಂದು ಶಾಸಕ ಡಾ.ಮಂತರ್ ಗೌಡ ಅವರು ಅಭಿಪ್ರಾಯಪಟ್ಟರು.
ಇದೇ ಸಂದರ್ಭ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಪಿ ಶಶಿಧರ್ ನಗರ ಕಾಂಗ್ರೆಸ್ ಅಧ್ಯಕ್ಷಜೋಸೆಫ್ ವಿಕ್ಟರ್ ಸೋನ್ಸ್,ಯೋಜನಾ ಪ್ರಾಧಿಕಾರದ ಅಧ್ಯಕ್ಷ ಪ್ರಮೋದ್ ಮುತ್ತಪ್ಪ, ಕೆ.ಪಿ ಚಂದ್ರಕಲಾ ಚಂದ್ರಶೇಖರ್ ಕಾಂಗ್ರೆಸ್ ಮುಖಂಡರಾದ ಇರ್ಫಾನ್, ನಟೇಶ್ ಗೌಡ,ಪ್ರಕಾಶ್, ಹೆಬ್ಬಾಲೆ ರಂಜನ್ ಇದ್ದರು.