ಕುಶಾಲನಗರ;ಮಳೆ ಹಾನಿ ನಿಯಂತ್ರಣ ಹಾಗೂ ಪೂರ್ವ ಸಿದ್ಧತಾ ಸಭೆ

Jun 9, 2026 - 18:27
 0  131
ಕುಶಾಲನಗರ;ಮಳೆ ಹಾನಿ ನಿಯಂತ್ರಣ ಹಾಗೂ ಪೂರ್ವ ಸಿದ್ಧತಾ ಸಭೆ

ಕುಶಾಲನಗರ,ಜೂಂ೯; ಮುಂಗಾರು ಮಳೆ ಹಾನಿ ನಿಯಂತ್ರಣ ಹಾಗೂ ಪೂರ್ವ ಸಿದ್ಧತೆಗೆ ಅನುಸರಿಸಬೇಕಾದ ಕ್ರಮಕ್ಕೆ ಸಂಬಂಧಿಸಿದಂತೆ ಶಾಸಕರಾದ ಡಾ.ಮಂತರ್ ಗೌಡರವರು ಅಧಿಕಾರಿಗಳೊಂದಿಗೆ ಸಮಾಲೋಚನೆ ಸಭೆ ನಡೆಯಿತು. ಮಳೆಹಾನಿ ನಿಯಂತ್ರಣಕ್ಕೆ ಹಾಗೂ ಪೂರ್ವ ಸಿದ್ಧತೆಗೆ ಸಂಬಂಧಿಸಿದಂತೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ತಾಲ್ಲೂಕು ವ್ಯಾಪ್ತಿಯ ಅಧಿಕಾರಿಗಳೊಂದಿಗೆ ಚರ್ಚಿಸಿದರು.

 ಮಳೆಗಾಲದ ವೇಳೆ ಯಾವುದೇ ರೀತಿಯ ಹಾನಿಗಳಾಗದಂತೆ ಕಟ್ಟುನಿಟ್ಟಿನ‌ ಕ್ರಮ ಕೈಗೊಳ್ಳಬೇಕು ಎಂದು ಆಯಾ ಗ್ರಾಮ ಪಂಚಾಯಿತಿ ಅಧಿಕಾರಿಗಳಿಗೆ, ಕಂದಾಯ ಇಲಾಖೆ, ಚೆಸ್ಕಾಂ, ಅರಣ್ಯ ಇಲಾಖೆ ಸೇರಿದಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಈ ಸಂದರ್ಭ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಟಾನ ಸಮಿತಿ ಅಧ್ಯಕ್ಷರಾದ ವಿ‌.ಪಿ.ಶಶಿಧರ್, ಕೂಡಾ ಅಧ್ಯಕ್ಷರಾದ ಪ್ರಮೋದ್ ಮುತ್ತಪ್ಪ, ಉಸ್ತುವಾರಿ ದಂಡಾಧಿಕಾರಿ ಕೃಷ್ಟಮೂರ್ತಿ, ಇ.ಒ ಅಪ್ಪಣ್ಣ, ತಾಲ್ಲೂಕು ವ್ಯಾಪ್ತಿಯ ಅಭಿವೃದ್ಧಿ ಅಧಿಕಾರಿಗಳು, ಕಂದಾಯ ಇಲಾಖೆ, ಚೆಸ್ಕಾಂ, ಅರಣ್ಯ ಇಲಾಖೆ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0