Kodagu

ಕುಶಾಲನಗರ; ವೇಶ್ಯವಾಟಿಕೆ ಇಬ್ಬರ ಬಂಧನ

admincoorgdaily

ಸಾಂದರ್ಭಿಕ ಚಿತ್ರ

ಕುಶಾಲನಗರ: ಮನೆಯೊಂದರಲ್ಲಿ ವೇಶ್ಯವಾಟಿಕೆ ನಡೆಸುತ್ತಿರುವುದನ್ನು ಪೊಲೀಸರು ಪತ್ತೆಹಚ್ಚಿದ್ದು, ಮಹಿಳೆ ಸೇರಿದಂತೆ ಇಬ್ಬರನ್ನು ಪೊಲೀಸರು ವಶಪಡಿಸಿಕೊಂಡಿದ್ದು, ಇಬ್ಬರು ಸಂತ್ರಸ್ತೆಯರನ್ನು ರಕ್ಷಿಸಿದ್ದಾರೆ. ಕುಶಾಲನಗರ ಟೌನ್ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಪಟ್ಟಣದ ಮುಳ್ಳುಸೋಗೆಯ ಮನೆಯೊಂದರಲ್ಲಿ ನಡೆಯುತ್ತಿದ್ದ ವೇಶ್ಯಟಿಕೆ ಅಡ್ಡೆಗೆ ಬುಧವಾರ ರಾತ್ರಿ ದಾಳಿ ಮಾಡಿದ್ದಾರೆ.

 ಈ ವೇಳೆ ಮೈಸೂರು ಮತ್ತು ಸೋಮವಾರಪೇಟೆಯ ಇಬ್ಬರು ಯುವತಿಯರನ್ನು ಬಳಸಿ ವೇಶ್ಯವಾಟಿಕೆ ದಂಧೆಯಲ್ಲಿ ತೊಡಗಿರುವುದು ಬೆಳಕಿಗೆ ಬಂದಿದೆ. ಈ ಸಂದರ್ಭ ಕೆಲವರು ಸ್ಥಳದಿಂದ ಪರಾರಿಯಾಗಿದ್ದು, ಅವರುಗಳ ಪತ್ತೆಗೆ ತನಿಖೆ ಚುರುಕುಗೊಂಡಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ರಕ್ಷಿಸಿದ ಸಂತ್ರಸ್ತ ಮಹಿಳೆಯರನ್ನು ಮಡಿಕೇರಿಯ ಮಹಿಳಾ ಸಾಂತ್ವನ ಕೇಂದ್ರಕ್ಕೆ ದಾಖಲಿಸಲಾಗಿದೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿ, ಡಿವೈಎಸ್‌ಪಿ ಚಂದ್ರಶೇಖರ್ ಮಾರ್ಗದರ್ಶನ, ಕುಶಾಲನಗರ ಟೌನ್ ಪೊಲೀಸ್ ಇನ್ಸ್‌ಪೆಕ್ಟ‌ರ್ ಪ್ರದೀಪ್‌ ಕುಮಾ‌ರ್ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಪೊಲೀಸ್ ಸಬ್‌ಇನ್ಸ್‌ಪೆಕ್ಟರ್ ಶಿವಣ್ಣ, ಗೀತಾ, ಸಿಬ್ಬಂದಿಗಳಾದ ಶಿವರಾಜು, ಜಾವಿದ್, ಬಸವರಾಜ್, ಗಾಯತ್ರಿ, ಜಯಶ್ರೀ ಮತ್ತಿತರರು ಪಾಲ್ಗೊಂಡಿದ್ದರು.