ಕುಶಾಲನಗರ : ವೀರಶೈವ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷ ಈಶ್ವರ ಖಂಡ್ರೆಗೆ ಸ್ವಾಗತ ; ರಾಜರ ಗದ್ದುಗೆ, ಕೋಟೆ ಅರಮನೆ ಸಂರಕ್ಷಣೆಗೆ ಸಚಿವರಿಗೆ ಮನವಿ ಪತ್ರ

ಕುಶಾಲನಗರ : ವೀರಶೈವ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷ ಈಶ್ವರ ಖಂಡ್ರೆಗೆ ಸ್ವಾಗತ ; ರಾಜರ ಗದ್ದುಗೆ, ಕೋಟೆ ಅರಮನೆ ಸಂರಕ್ಷಣೆಗೆ ಸಚಿವರಿಗೆ ಮನವಿ ಪತ್ರ

ಕುಶಾಲನಗರ : ಕೊಡಗು ಜಿಲ್ಲೆಗೆ ಬುಧವಾರ ಆಗಮಿಸಿದ ಅಖಿಲ ಭಾರತ ವೀರಶೈವ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರೂ ಆಗಿರುವ ಅರಣ್ಯ ಸಚಿವ ಈಶ್ವರ ಖಂಡ್ರೆ ಅವರನ್ನು ಕೊಡಗು ಜಿಲ್ಲಾ ವೀರಶೈವ ಮಹಾಸಭಾದ ವತಿಯಿಂದ ಆತ್ಮೀಯವಾಗಿ ಸ್ವಾಗತಿಸಲಾಯಿತು.

ಕೊಡಗಿನ ಪ್ರವೇಶ ದ್ವಾರ ಟೋಲ್ ಗೇಟ್ ಬಳಿ ಕಾವೇರಿ ದೇಗುಲದಲ್ಲಿ ಈಶ್ವರ ಖಂಡ್ರೆ ಅವರಿಗೆ ಕೊಡಗು ಜಿಲ್ಲಾ ವೀರಶೈವ ಮಹಾಸಭಾದ ಅಧ್ಯಕ್ಷ ಎಚ್.ವಿ.ಶಿವಪ್ಪ ಅವರು ‌ಪುಷ್ಪಹಾರ ಹಾಕಿ ಗೌರವಿಸಿದರು. ಕರ್ನಾಟಕ ರಾಜ್ಯ ಸರ್ಕಾರ ಸಾಂಸ್ಕೃತಿಕ ನಾಯಕನಾಗಿ ಬಸವಣ್ಣನವರನ್ನು ಘೋಷಿಸಲಾಗಿದೆ.ಆದರೆ ಇದೂವರೆಗೂ ಜಿಲ್ಲಾ ಕೇಂದ್ರದಲ್ಲಿ ಜಿಲ್ಲಾ ಬಸವ ಭವನ ವನ್ನು ನಿರ್ಮಾಣ ಮಾಡುವ ಸಂಬಂಧ ರಾಜ್ಯ ಸರ್ಕಾರ ಸೂಕ್ತವಾದ ಭೂಮಿಯೊಂದಿಗೆ ಪೂರಕ ಅನುದಾನವನ್ನು ಬಿಡುಗಡೆಗೊಳಿಸಬೇಕು ಎಂದು ಶಿವಪ್ಪ ಅವರು ಸಚಿವರಲ್ಲಿ ಮನವಿ ಮಾಡಿದರು.

 ಮಡಿಕೇರಿಯಲ್ಲಿರುವ ರಾಜರ ಗದ್ದುಗೆ, ಕೋಟೆ ಅರಮನೆಗಳ ಸಂರಕ್ಷಣೆಗೆ ವಿಶೇಷ ಒತ್ತು ನೀಡಬೇಕೆಂದು ಸಚಿವರಿಗೆ ಮನವಿ ಪತ್ರ ಸಲ್ಲಿಸಲಾಯಿತು.

 ಈ ಸಂದರ್ಭ ಮಹಾಸಭಾ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಶಾಂಭ ಶಿವಯ್ಯ, ಉಪಾಧ್ಯಕ್ಷ ಎಚ್. ಪಿ. ಉದಯ ಕುಮಾರ್,ತಾಲ್ಲೂಕು ವೀರಶೈವ ಮಹಾಸಭಾ ಅಧ್ಯಕ್ಷ ಹೆಚ್.ಎಂ. ಮಧುಸೂಧನ್, ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ಅಧ್ಯಕ್ಷ ಕೆ. ಎಸ್. ಮೂರ್ತಿ, ಜಿಲ್ಲಾ ಯುವ ಘಟಕದ ಅಧ್ಯಕ್ಷ ಮೋಹನ್, ಪ್ರಧಾನ ಕಾರ್ಯದರ್ಶಿ ಬಿ. ನಟರಾಜು, ಪ್ರಮುಖರಾದ ಕೆ.ಪಿ. ಪರಮೇಶ್, ಎಂ. ಎಸ್.ಗಣೇಶ್, ಎಂ. ಎಸ್. ಲೋಕೇಶ್, ಟಿ.ಜಿ. ಪ್ರೇಮ್ ಕುಮಾರ್, ಎಪಿಸಿಎಂಎಸ್ ಅಧ್ಯಕ್ಷ ಹೆಚ್. ಬಿ. ಚಂದ್ರಪ್ಪ, ತೊರೆನೂರು ಸಹಕಾರ ಸಂಘದ ಅಧ್ಯಕ್ಷರಾದ ಟಿ. ಬಿ.ಜಗದೀಶ್, ಶಿವಲಿಂಗಪ್ಪ, ಬಿ.ಬಿ.ಲೋಕೇಶ್, ಕೊಪ್ಪಾ ಉದ್ಯಮಿ ನಟ ಭಾಗವಹಿಸಿದ್ದರು.