ಕುಶಾಲನಗರ:ಕಾಫಿ ಕಳವು ಪ್ರಕರಣ ಐದು ಆರೋಪಿಗಳ ಬಂಧನ
ಕುಶಾಲನಗರ:ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕೂಡ್ಲೂರು ಗ್ರಾಮದ ಕೈಗಾರಿಕಾ ಪ್ರದೇಶದಲ್ಲಿರುವ ಶ್ರೀ ಉಮಾ ಕಾಫಿ ವರ್ಕ್ಸ್ನಲ್ಲಿ ಸಂಗ್ರಹಿಸಿಟ್ಟಿದ್ದ ಅಂದಾಜು 7000 ಕೆ.ಜಿ ತೂಕದ ಕಾಫಿ ಕಳ್ಳತನವಾಗಿರುವ ಕುರಿತು ದೂರು ಸ್ವೀಕರಿಸಿದ್ದು, ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕಲಂ: 306, 3(5) ಬಿಎನ್ಎಎಸ್ ಆಕ್ಟ್ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣಾ ಅಧಿಕಾರಿ & ಸಿಬ್ಬಂದಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿ ಅಪರಾಧ ಕೃತ್ಯಕ್ಕೆ ಸಂಬಂಧಿಸಿದ ಮಾಹಿತಿ ಹಾಗೂ ಸಾಕ್ಷ್ಯಾಧಾರಗಳನ್ನು ಕಲೆ ಹಾಕಿ ತನಿಖೆ ಕೈಗೊಳ್ಳಲಾಗಿತ್ತು. ಪ್ರಕರಣಗಳ ಆರೋಪಿಗಳ ಪತ್ತೆಗಾಗಿ ಶ್ರೀ ಚಂದ್ರಶೇಖರ್, ಡಿಎಪಿ, ಸೋಮವಾರಪೇಟೆ ಉಪ ವಿಭಾಗ, ಶ್ರೀ ದಿನೇಶ್ ಕುಮಾರ್, ಸಿಪಿಐ, ಕುಶಾಲನಗರ ವೃತ್ತ, ಶ್ರೀ ರಾಮಚಂದ್ರ, ಪಿಎಸ್‌ಐ, ಕುಶಾಲನಗರ ಗ್ರಾಮಾಂತರ ಪೊ.ತಾ ಮತ್ತು ವೃತ್ತ ಮಟ್ಟದ ಅಪರಾಧ ಪತ್ತೆ ಸಿಬ್ಬಂದಿಗಳು ಹಾಗೂ ತಾಂತ್ರಿಕ ವಿಭಾಗದ ಸಿಬ್ಬಂದಿಗಳ ವಿಶೇಷ ತಂಡವನ್ನು ರಚಿಸಿ ತನಿಖೆ ಕೈಗೊಂಡು ಮಾಹಿತಿ ಸಂಗ್ರಹಿಸಿ ದಿನಾಂಕ: 01-09-2025 ರಂದು 05 ಜನ ಆರೋಪಿಗಳನ್ನು ದಸ್ತಗಿರಿ ಮಾಡಿ ಘನ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ಆರೋಪಿಗಳ ವಿವರ: ಸುನೀಲ್.ಆರ್, 34 ವರ್ಷ, ಬೈಲುಕುಪ್ಪೆ ಗ್ರಾಮ, ರಾಜು.ಆರ್. 24 ವರ್ಷ, ಬೈಲುಕುಪ್ಪೆ ಗ್ರಾಮ, ಶರತ್.ಆರ್. 24 ವರ್ಷ, ಹಳೆಯೂರು, ಬೈಲುಕುಪ್ಪೆ ಗ್ರಾಮ. ದಿನೇಶ್ ರಾವತ್, 44 ವರ್ಷ, ಪಶ್ಚಿಮ ಚಂಪಾರಣ್ ಜಿಲ್ಲೆ, ಬಿಹಾರ ರಾಜ್ಯ,ಜೀತೇಂದ್ರ ಕುಮಾರ್ ರಾಮ್. 38 ವರ್ಷ, ಪೂರ್ವ ಚಂಪಾರಣ್ ಜಿಲ್ಲೆ, ಬಿಹಾರ ರಾಜ್ಯ.
ಪ್ರಕರಣದಲ್ಲಿ ವಶಪಡಿಸಿಕೊಂಡ ಸ್ವತ್ತುಗಳ ವಿವರ: 1. 6495 ಕೆ.ಜಿ ಕಾಫಿ 2. ಒಂದು ಕಾರು. 3. ಎರಡು ದ್ವಿಚಕ್ರ ವಾಹನ. 4. ಒಂದು ಆಟೋ
ಪ್ರಕರಣಗಳಲ್ಲಿ ಆರೋಪಿಗಳನ್ನು ಪತ್ತೆ ಹಚ್ಚಿ ಕಳವು ಮಾಲನ್ನು ವಶಪಡಿಸಿಕೊಳ್ಳುವಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸಿದ ಅಧಿಕಾರಿ ಹಾಗೂ ಸಿಬ್ಬಂದಿಯವರುಗಳನ್ನು ಶ್ರೀ ಕೆ.ರಾಮರಾಜನ್, ಐಪಿಎಸ್, ಪೊಲೀಸ್ ಅಧೀಕ್ಷಕರು, ಕೊಡಗು ಜಿಲ್ಲೆ ಮತ್ತು ಶ್ರೀ ದಿನೇಶ್ ಕುಮಾರ್.ಬಿ.ಪಿ. ಹೆಚ್ಚುವರಿ ಪೊಲೀಸ್ ಅಧೀಕ್ಷಕರು, ಕೊಡಗು ಜಿಲ್ಲೆ ರವರು ಶ್ಲಾಘಿಸಿರುತ್ತಾರೆ.