ಕುಶಾಲನಗರ: ಮತಾಂತರ ಪ್ರಕರಣ, ಇಬ್ಬರು ಆರೋಪಿಗಳ ಬಂಧನ

Jun 17, 2026 - 13:35
 0  1.8k
ಕುಶಾಲನಗರ: ಮತಾಂತರ ಪ್ರಕರಣ, ಇಬ್ಬರು ಆರೋಪಿಗಳ ಬಂಧನ

ಮಡಿಕೇರಿ:ಕುಶಾಲನಗರದಲ್ಲಿ ನಡೆದಿದೆ ಎನ್ನಲಾಗುತ್ತಿರುವ ಮತಾಂತರ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿ ಕ್ರಮ ಕೈಗೊಂಡಿದ್ದಾರೆ.

ಕುಶಾಲನಗರ ಸಮೀಪದ ಕಾವೇರಿ ನಿಸರ್ಗಧಾಮ ಬಳಿಯ ವ್ಯಾಪಾರಿ ಸಲೀಂ ಮತ್ತು ಜಲೀಲ್ ಎಂಬವರನ್ನು ಕುಶಾಲನಗರದ ನಿವಾಸಿ ರಾಜೀವ್ ಎಂಬವರ ದೂರಿನ ಹಿನ್ನೆಲೆಯಲ್ಲಿ ಪೊಲೀಸರು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದಾರೆ. ರಾಜೀವ್ ಪತ್ನಿಯನ್ನು - ಪೊಲೀಸರು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ.

ಸಂತ್ರಸ್ತ ಬಾಲಕನನ್ನು ಸಾಂತ್ವನ ಕೇಂದ್ರಕ್ಕೆ ಕಳಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಹೆಚ್ಚಿನ ವಿಚಾರಣೆ ನಡೆಯುತ್ತಿದೆ ಎಂದು ಕುಶಾಲನಗರ ಟೌನ್ ಪೊಲೀಸ್ - ಇನ್ಸ್‌ಪೆಕ್ಟರ್ ಪ್ರದೀಪ್ ಕುಮಾರ್ ತಿಳಿಸಿದ್ದಾರೆ.

What's Your Reaction?

Like Like 0
Dislike Dislike 0
Love Love 3
Funny Funny 1
Angry Angry 0
Sad Sad 3
Wow Wow 0