ಕುಟ್ಟ: 3.23 ಕೋಟಿ ರೂ. ವೆಚ್ಚದ ಪರಿಶಿಷ್ಟ ಪಂಗಡ ವಿದ್ಯಾರ್ಥಿನಿಲಯ ಲೋಕಾರ್ಪಣೆ

ಕುಟ್ಟ: 3.23 ಕೋಟಿ ರೂ. ವೆಚ್ಚದ ಪರಿಶಿಷ್ಟ ಪಂಗಡ ವಿದ್ಯಾರ್ಥಿನಿಲಯ ಲೋಕಾರ್ಪಣೆ

ಕುಟ್ಟ, ಪೊನ್ನಂಪೇಟೆ, ಜೂ. 26: ವಿರಾಜಪೇಟೆ ಶಾಸಕ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರು ಪೊನ್ನಂಪೇಟೆ ತಾಲ್ಲೂಕಿನ ಕುಟ್ಟದಲ್ಲಿ 3.23 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ಪರಿಶಿಷ್ಟ ಪಂಗಡ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿನಿಲಯದ ನೂತನ ಕಟ್ಟಡವನ್ನು ಲೋಕಾರ್ಪಣೆಗೊಳಿಸಿದರು.

ಶಾಸಕರು ಮಾತನಾಡಿ, "ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ನಾನು ಕಾನೂನು ಸಲಹೆಗಾರನಾಗಿದ್ದಾಗ ಈ ವಸತಿ ಶಾಲೆಯ ನೂತನ ಕಟ್ಟಡಕ್ಕೆ 3.23 ಕೋಟಿ ರೂ. ವಿಶೇಷ ಅನುದಾನ ಮಂಜೂರು ಮಾಡಿಸಿದ್ದೆ. ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಉನ್ನತ ಮಟ್ಟದ ಶಿಕ್ಷಣ ಒದಗಿಸುವುದು ಸರ್ಕಾರದ ಆದ್ಯತೆ. ವಿದ್ಯಾರ್ಥಿಗಳು ಈ ಸೌಲಭ್ಯವನ್ನು ಸದುಪಯೋಗಪಡಿಸಿಕೊಂಡು ಉತ್ತಮ ವಿದ್ಯಾಭ್ಯಾಸ ಮಾಡಿ ಸಮಾಜಕ್ಕೆ ಮಾದರಿಯಾಗಬೇಕು" ಎಂದು ಕರೆ ನೀಡಿದರು.

 ಕಾರ್ಯಕ್ರಮದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತಿತೀರ ಧರ್ಮಜ ಉತ್ತಪ್ಪ, ಬ್ಲಾಕ್ ಅಧ್ಯಕ್ಷ ಮಿದೇರಿರ ನವೀನ್, ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಕಾಳಿಮಾಡ ಪ್ರಶಾಂತ್, ಮಾಜಿ ಜಿ.ಪಂ. ಸದಸ್ಯ ಬಾನಂಡ ಪ್ರತ್ಯು, ವಲಯ ಅಧ್ಯಕ್ಷ ರಾಮಕೃಷ್ಣ, ಮುಖಂಡರಾದ ಪಾಲ್ವಿನ್ ಪೂಣಚ್ಚ, ಮುಕಟೀರ ನವೀನ್ ಅಯ್ಯಪ್ಪ, ಐಟಿಡಿಪಿ ಇಲಾಖೆ ಅಧಿಕಾರಿಗಳು ಸೇರಿದಂತೆ ಹಲವರು ಉಪಸ್ಥಿತರಿದ್ದರು.