ನಾಳೆ ಕಾರ್ಮಿಕ ಸಚಿವ ಸಂತೋಷ್ ಲಾಡ್ ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ

ಮಡಿಕೇರಿ :-ಕಾರ್ಮಿಕ ಸಚಿವರಾದ ಸಂತೋಷ್ ಎಸ್.ಲಾಡ್ ಅವರು ಸೆಪ್ಟೆಂಬರ್, 17 ರಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಮಾನ್ಯ ಸಚಿವರು ಸೆ.17 ರಂದು ಬೆಳಗ್ಗೆ 9 ಗಂಟೆಗೆ ನಗರದ ಐಬಿಯಲ್ಲಿ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಮತ್ತು ಪೊಲೀಸ್ ವರಿಷ್ಠಾಧಿಕಾರಿಗಳ ಜೊತೆ ಚರ್ಚೆ ನಡೆಸಲಿದ್ದಾರೆ.
ಬಳಿಕ ಬೆಳಗ್ಗೆ 11 ಗಂಟೆಗೆ ನಗರದ ಹಿಲ್‍ಡೇಲ್ ರೆಸಾರ್ಟ್(ಕ್ರಿಸ್ಟಲ್ ಹಾಲ್)ನಲ್ಲಿ ಕೊಡಗು ಜಿಲ್ಲೆಯ ಅಸಂಘಟಿತ ವರ್ಗಗಳ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಮತ್ತು ವಿವಿಧ ಯೋಜನೆಗಳ ಕುರಿತು ಅರಿವು ಮೂಡಿಸುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ನಂತರ ಮಧ್ಯಾಹ್ನ 3 ಗಂಟೆಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೊಡಗು ಜಿಲ್ಲೆಯ ವಿವಿಧ ಸಂಸ್ಥೆಗಳ ಪ್ರಮುಖರೊಂದಿಗೆ ಚರ್ಚೆ ನಡೆಸಲಿದ್ದಾರೆ ಎಂದು ಕಾರ್ಮಿಕ ಸಚಿವರ ಆಪ್ತ ಕಾರ್ಯದರ್ಶಿ ಪಿ.ಕುಮಾರ್ ಅವರು ತಿಳಿಸಿದ್ದಾರೆ.