ತಪೊಕ್ಷೇತ್ರ ಮನೆಹಳ್ಳಿ ಮಠದಲ್ಲಿ ಸಂಭ್ರಮದ ಲಕ್ಷದೀಪೂತ್ಸವ
ಸೋಮವಾರಪೇಟೆ:- ತಾಲೂಕಿನ ಆಲೂರುಸಿದ್ದಾಪುರ ಸಮೀಪದ ತಪೋಕ್ಷೇತ್ರ ಮನೆಹಳ್ಳಿ ಮಠದಲ್ಲಿ ಸಂಭ್ರಮದ ದೀಪೋತ್ಸವ ಹಾಗೂ ಶ್ರದ್ಧಾ ಭಕ್ತಿಯಿಂದ ಶ್ರೀ ಗುರುಸಿದ್ಧವೀರೇಶ್ವರರ ಉತ್ಸವ ನಡೆಯಿತು.
ಅಕ್ಕಪಕ್ಕದ ಗ್ರಾಮಗಳು ಸೇರಿದಂತೆ ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ ಸಹಸ್ರಾರು ಭಕ್ತಾದಿಗಳು ದೀಪೋತ್ಸವವನ್ನು ಕಣ್ತುಂಬಿಕೊಂಡರು.
ಬೆಳಗಿನಿಂದಲೇ ಕ್ಷೇತ್ರದ ದೇವರಿಗೆ ವಿಶೇಷ ಪೂಜೆ,ಅರ್ಚನೆ ನಡೆಯಿತು. ಮಹಿಳೆಯರಾದಿಯಾಗಿ ಹಲವು ಭಕ್ತರು ಮಠದ ಆವರಣವನ್ನು ತಳಿರು ತೋರಣಗಳಿಂದ ಹಾಗೂ ವೈವಿಧ್ಯಮಯ ರಂಗೋಲಿಬಿಡಿಸಿ ಅಲಂಕರಿಸಿದ್ದರು.ರಾತ್ರಿ,ಆಗಸದಲ್ಲಿ ಪೂರ್ಣ ಚಂದ್ರ ಕಂಗೊಳಿದರೆ ಕ್ಷೇತ್ರದ ತುಂಬೆಲ್ಲಾ ಹಣತೆಗಳು ಪ್ರಜ್ವಲಿಸುತ್ತಿದ್ದವು.
ಸಂಜೆ ನಡೆದ ಧಾರ್ಮಿಕ ಸಮಾರಂಭಲ್ಲಿ ಶಿಕ್ಣಣ ತಜ್ಞ ದಾವಣಗೆರೆಯ ಸಾಗರ್ ಮಾತನಾಡಿ, ಇಂದಿನ ದಿನಮಾನಗಳಲ್ಲಿ ಮಕ್ಕಳು ಅನ್ಯ ಮಾರ್ಗ ಹಿಡಿದಿರುವುದು ಆತಂಕಕಾರಿ ವಿಚಾರವಾಗಿದೆ ಎಂದರು.
ಆನ್ ಲೈನ್ ಗೇಮ್ ಗಳಿಗೆಬಲಿಯಾಗುತ್ತಿದ್ದಾರೆ ಎಂತಹ ಪರಿಸ್ಥಿತಿ ಬಂದಿದೆ ಎಂದರು.ನಮ್ಮ ಶಿಕ್ಷಣ ವ್ಯವಸ್ಥೆ ಬದಲಾಗಬೇಕಿದೆ ಇಂದು ಇರುವುದು ಕೇವಲ ಪದವಿಗಾಗಿ ಮಾತ್ರ ಆದರೆ ನೈತಿಕ ಶಿಕ್ಷಣ ಅವಶ್ಯಕತೆ ಇದೆ ಎಂದ ಅವರು ಬಸವಣ್ಣ ನವರ ಅನುಭವ ಮಂಟಪದ ರೀತಿಯ ಶಿಕ್ಷಣ ವ್ಯವಸ್ಥೆ ಬರಬೇಕು,ವಿದ್ಯಾರ್ಥಿಗಳು ಪ್ರಶ್ನಿಸುವುದನ್ನು ಕಲಿಯಬೇಕು ಎಂದರು,ಬಸವಣ್ಣನವರ ತತ್ವ ಗಳ ಬಗ್ಗೆ ಇನ್ನೂ ಹೆಚ್ಚಿನ ಸಂಶೋಧನೆಮಾಡಬೇಕಾಗಿದೆಎಂದ ಅವರು ಮಕ್ಕಳಿಗೆ ಪೋಷಕರು ಹೆಚ್ಚಿನ ಸಮಯ ಹಾಗೂ ಸಂಪೂರ್ಣ ಬೆಂಬಲ ನೀಡಬೇಕಾಗಿದೆ ಎಂದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಮನೆಹಳ್ಳಿ ಮಠಾಧ್ಯಕ್ಷರಾದ ಶ್ರೀ ಶ್ರೀ ಮಹಾಂತ ಶಿವಲಿಂಗ ಸ್ವಾಮೀಜಿ, ಶ್ರೀಕ್ಷೇತ್ರ ಮನೆಹಳ್ಳಿ ಮಠವು ಈ ಹಿಂದೆ ಅಜ್ಞಾತ ಸ್ಥಳವಾಗಿದ್ದು, ವರ್ಷದಿಂದ ವರ್ಷಕ್ಕೆ ಧಾರ್ಮಿಕತೆಯ ಶ್ರದ್ಧಾಕೇಂದ್ರವಾಗಿ ರೂಪುಗೊಳ್ಳುತ್ತಿದೆ. ಕಾಡುಗಳಿಂದ ಕೂಡಿದ್ದ ಈ ಪ್ರದೇಶದಲ್ಲಿ ಶ್ರೀ ಗುರು ಸಿದ್ಧವೀರೇಶ್ವರ ಸ್ವಾಮಿಯವರ ಕೃಪಾ ವಿಶೇಷತೆಯಿಂದ ಗುಡಿ ಗೋಪುರಗಳು, ಪೂಜಾ ಕೈಂಕರ್ಯಗಳು, ದಾಸೋಹ ಕಾಯಕಗಳಿಂದ ಸಂಸ್ಕಾರಯುತ ಮೌಲ್ಯಗಳಿಂದ ತುಂಬಿರುವ ತಪೋಕ್ಷೇತ್ರವಾಗಿ ಬೆಳೆದುಬರುತ್ತಿದೆ ಎಂದರು.
ಕಾರ್ಯಕ್ರಮವನ್ನು ಉದ್ಘಾಟಿಸಿದ ಹಾಸನ ಜಿಲ್ಲಾ ಬಿಜೆಪಿ ಅಧ್ಯಕ್ಷ ಸಿದ್ದೇಶ್ ನಾಗೇಂದ್ರ ಮಾತನಾಡಿ ಕೊಡಗು ಮಠಗಳ ನಾಡು ಎಂದೇ ಪರಿಗಣಿಸಲ್ಪಡುವ ಜಿಲ್ಲೆಯಾಗಿದೆ.ಉತ್ತರ ಕೊಡಗಿನಲ್ಲಿ ಶ್ರೀ ಕ್ಷೇತ್ರ ತಪೋವನ ಮನೆಹಳ್ಳಿ ಮಠವು ಧಾರ್ಮಿಕ, ಸಾಮಾಜಿಕ ಸೇವಾ ಕಾರ್ಯಗಳಿಂದ ಭಕ್ತರ ಪಾಲಿಗೆ ಪುಣ್ಯಕ್ಷೇತ್ರವಾಗಿ ರೂಪುಗೊಂಡಿರುವುದು ಹೆಮ್ಮೆಯ ಸಂಗತಿ ಎಂದರು.ನಮ್ಮ ದೇಶದಲ್ಲಿ ನಮ್ಮ ತನವನ್ನು ನಾವು ಮರೆಯುತ್ತಿದ್ದೇವೆ ಅನ್ಯ ಆಚಾರ,ವಿಚಾರಗಳಿಗೆ ಒಳಗಾಗುತ್ತಿದ್ದೇವೆ ಎಂದು ವಿಶಾದಿದರು.
ಬೇರೆ ಧರ್ಮದವರು ಅವರ ಧಾರ್ಮಿಕ ಧಾರ್ಮಿಕ ಆಚಾರ,ವಿಚಾರ ಗಳನ್ನೂ ಚಾಚುತಪ್ಪದೆ ಪಾಲಿಸುತ್ತಾರೆ ಆದರೆ ನಮ್ಮ ಸಮುದಾಯದವರು ಇಷ್ಟ ಲಿಂಗ ಧರಿಸಲೂ ಕಷ್ಟ ಪಡುತ್ತಾರೆ ಎಂದು ವಿಷಾಧಿಸಿದರು.
ಈ ಸಂದರ್ಭ ರಾಜ್ಯ ಉಚ್ಛ ನ್ಯಾಯಾಲಯದ ಹಿರಿಯ ವಕೀಲ ಚಂದ್ರಮೌಳಿ ಯವರು ಕ್ಷೇತ್ರದ 2026ನೇ ಸಾಲಿನ ಕ್ಯಾಲೆಂಡರ್ ಬಿಡುಗಡೆ ಮಾಡಿದರು.
ಕಾರ್ಯಕ್ರಮದ ವೇದಿಕೆಯಲ್ಲಿ ಅರಮೇರಿ ಕಳಂಚೇರಿ ಮಠದ ಶಾಂತ ಮಲ್ಲಿಕಾರ್ಜುನ ಸ್ವಾಮೀಜಿ,ಕಲ್ಲುಮಠದ ಶ್ರೀ.ಮಹಾಂತ ಸ್ವಾಮೀಜಿ,ಮುಳ್ಳೂರು ಮಠದ ಶ್ರೀ.ಸ್ವತಂತ್ರ ಬಸವಲಿಂಗ ಸ್ವಾಮೀಜಿ,ಕಿರಿಕೊಡ್ಲಿ ಮಠದ ಸದಾಶಿವ ಸ್ವಾಮೀಜಿ,
ಚಿಲುಮೆಮಠದ ಜಯದೇವ ಸ್ವಾಮೀಜಿ,ತೊರೆನೂರು ಮಠದ ಮಲ್ಲೇಶ ಸ್ವಾಮೀಜಿ,ಶಿಡಿಗಳಲೆ ಮಠದ ಶ್ರೀ.ಇಮ್ಮಡಿ ಶಿವಲಿಂಗ ಸ್ವಾಮೀಜಿ ಸೇರಿದಂತೆ ವಿವಿಧ ಗಣ್ಯರು ಉಪಸ್ತಿತರಿದ್ದರು.ತಪೋವನೇಶ್ವರಿ ಮಹಿಳಾತಂಡದಿಂದ ಪ್ರಾರ್ಥನೆ ನಡೆಯಿತು.
