ಹುದಿಕೇರಿ ಕೊಡವ ಸಮಾಜದಲ್ಲಿ ಕೊಡವ ಸಂಸ್ಕೃತಿ ಉತ್ತೇಜಿಸುವ ವಾಲಗತಾಟ್ ಕಾರ್ಯಕ್ರಮಕ್ಕೆ ಚಾಲನೆ

Dec 21, 2025 - 13:38
 0  311
ಹುದಿಕೇರಿ ಕೊಡವ ಸಮಾಜದಲ್ಲಿ ಕೊಡವ ಸಂಸ್ಕೃತಿ ಉತ್ತೇಜಿಸುವ ವಾಲಗತಾಟ್ ಕಾರ್ಯಕ್ರಮಕ್ಕೆ  ಚಾಲನೆ

ಪೊನ್ನಂಪೇಟೆ:ಹುದಿಕೇರಿಯ ಕೊಡವ ಸಮಾಜ ಸಭಾಂಗಣದಲ್ಲಿ, ತೂಕ್ ಬೊಳಕ್ ಕಲೆ, ಕ್ರೀಡೆ ಸಾಹಿತ್ಯ ಅಕಾಡೆಮಿ (ರಿ), ಇವರು ಆಯೋಜಿಸಿದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು ಭಾಗವಹಿಸಿದರು.   

ಬಳಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಮಾನ್ಯ ಶಾಸಕರು ಸಂಸ್ಥೆಯು ಹಲವಾರು ಸಮಯದಿಂದ ಕಲೆ ಕ್ರೀಡೆ ಹಾಗೂ ಸಾಹಿತ್ಯದ ಪ್ರಚಾರಕ್ಕಾಗಿ ಹಲವಾರು ಉತ್ತಮ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದು ಇದು ನಾಡಿಗೆ ಹಾಗೂ ನಾಡಿನ ಜನತೆಗೆ ಉತ್ತಮ ವೇದಿಕೆಯನ್ನು ಕಲ್ಪಿಸಿ ಕೊಡುತ್ತಿದೆ. ಇಂಥ ಕಾರ್ಯಕ್ರಮಗಳು ನಾಡಿನಲ್ಲಿ ಮತ್ತಷ್ಟು ನಡೆಯುವಂತಾಗಬೇಕು. ಹೀಗೆ ಆದಲ್ಲಿ ನಮ್ಮ ಕಲೆ, ಸಂಸ್ಕೃತಿ, ಸಾಹಿತ್ಯ ಹಾಗೂ ಕ್ರೀಡೆಯನ್ನು ಪೋಷಿಸಿಕೊಂಡು ಮುಂದಿನ ಪೀಳಿಗೆಗೆ ತಲುಪಿಸುವಲ್ಲಿ ಇದು ಸಹಕಾರಿಯಾಗಲಿದೆ ಎಂದು ಬಣ್ಣಿಸಿದರು.

ಈ ಸಂದರ್ಭ ಶಾಸಕ ಪೊನ್ನಣ್ಣ ಸೇರಿದಂತೆ ವೇದಿಕೆಯಲ್ಲಿದ್ದ ಅತಿಥಿಗಳು ವಾಲಗತಾಟ್ ಪ್ರದರ್ಶನ ಮಾಡಿ ಗಮನ ಸೆಳೆದರು.

ಈ ಸಂದರ್ಭದಲ್ಲಿ ತೂಕ್ ಬೊಳಕ್ ಕಲೆ, ಕ್ರೀಡೆ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಮುಲ್ಲೇಂಗಡ ಶಂಕರಿ ಪೂವಯ್ಯ, ಮದೋಶ್ ಪೂವಯ್ಯ,ಹುದಿಕೇರಿ ಕೊಡವ ಸಮಾಜ ಅಧ್ಯಕ್ಷ ಮೀದೇರೀರ ಸವಿನ, ಪೊನ್ನಂಪೇಟೆ ಕೊಡವ ಸಮಾಜ ಅಧ್ಯಕ್ಷ ಕಾಳಿಮಾಡ ಮೋಟಯ್ಯ, ಟಿ. ಶೆಟ್ಟಿಗೇರಿ ಕೊಡವ ಸಮಾಜ ಅಧ್ಯಕ್ಷ ಕೈಬುಲೀರ ಹರೀಶ್ ಅಪ್ಪಯ್ಯ, ಕಾವೇರಿ ಎಜುಕೇಶನ್ ಸೊಸೈಟಿ ಅಧ್ಯಕ್ಷ ಮಂಡೆಪಂಡ ಸುಗುಣ ಮುತ್ತಣ್ಣ, ಸರ್ವೆ ಇಲಾಖೆ ಎ. ಡಿ. ಎಲ್. ಆರ್. ಬಾನoಗಡ ಅರುಣ್, ಬಯವಂಡ ಮಹಾಬಲ, ಕೈಬುಲೀರ ಪಾರ್ವತಿ ಬೋಪಯ್ಯ, ಕೇಶವ್ ಕಾಮತ್ ಸೇರಿದಂತೆ ಪದಾಧಿಕಾರಿಗಳು ಹಾಗೂ ಪ್ರಮುಖರು ಉಪಸ್ಥಿತರಿದ್ದರು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0