ಸಮಾಜದಲ್ಲಿ ನೊಂದವರಿಗೆ ನ್ಯಾಯ ಕೊಡಿಸುವ ಮಹತ್ತರ ಜವಾಬ್ದಾರಿ ವಕೀಲರ ಮೇಲಿದೆ: ಶಾಸಕ ಎ.ಎಸ್ ಪೊನ್ನಣ್ಣ

Jul 4, 2025 - 18:50
 0  61
ಸಮಾಜದಲ್ಲಿ ನೊಂದವರಿಗೆ ನ್ಯಾಯ ಕೊಡಿಸುವ ಮಹತ್ತರ ಜವಾಬ್ದಾರಿ ವಕೀಲರ ಮೇಲಿದೆ: ಶಾಸಕ ಎ.ಎಸ್ ಪೊನ್ನಣ್ಣ

ಬೆಂಗಳೂರು:ಕರ್ನಾಟಕ ರಾಜ್ಯ ವಕೀಲರ ಪರಿಷತ್ ವತಿಯಿಂದ ಇಂದು ಬೆಂಗಳೂರಿನ ಹೈಕೋರ್ಟ್ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ನವರು ಮುಖ್ಯ ಅತಿಥಿಯಾಗಿ ಭಾಗವಹಿಸಿದರು.

 ವಕೀಲರ ನೋಂದಣಿ ಹಾಗೂ ಮಣಿಪುರ ಉಚ್ಛ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಗಳಾದ ಸನ್ಮಾನ್ಯ ಶ್ರೀ ಕೆ ಸೋಮಶೇಖರ್ ರವರಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಇದೇ ಸಂದರ್ಭದಲ್ಲಿ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎ. ಎಸ್. ಪೊನ್ನಣ್ಣ ರವರಿಗೂ ಕೂಡ ಸನ್ಮಾನಿಸಲಾಯಿತು.    

ಸನ್ಮಾನ ಸ್ವೀಕರಿಸಿ ಮಾತನಾಡಿದ ಶಾಸಕರು ವಕೀಲ ವೃತ್ತಿಯು ಸಮಾಜದಲ್ಲಿ ಒಂದು ಉನ್ನತ ವೃತ್ತಿಯಾಗಿದೆ. ಸಮಾಜದಲ್ಲಿ ನೊಂದವರಿಗೆ ನ್ಯಾಯ ಕೊಡಿಸುವ ಮಹತ್ತರ ಜವಾಬ್ದಾರಿ ವಕೀಲರ ಮೇಲು ಸಹ ಇದೆ. ವಕೀಲರು ತಮ್ಮ ಕಕ್ಷಿದಾರರಿಗೆ ನ್ಯಾಯ ಒದಗಿಸಲು ಶ್ರಮಿಸಬೇಕೆಂದು ಕರೆ ನೀಡಿದರು.

ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ವಕೀಲರ ಪರಿಷತ್ ಅಧ್ಯಕ್ಷರಾದ ಮಿತ್ತಲ್ ಕೋಡ್ ಎಸ್. ಎಸ್ ,ಹಿರಿಯ ವಕೀಲರು, ಕರ್ನಾಟಕ ರಾಜ್ಯ ವಕೀಲರ ಪರಿಷತ್ ನೋಂದಣಿ ಸಮಿತಿಯ ಅಧ್ಯಕ್ಷರು ಹಾಗೂ ಸದಸ್ಯರು ಹಾಗೂ ಪ್ರಮುಖರು ಉಪಸ್ಥಿತರಿದ್ದರು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0