ಶಾಸಕ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ನೇತೃತ್ವದಲ್ಲಿ, ಕೊಡಗು ಗೌಡ ಸಮಾಜದ ವತಿಯಿಂದ ಮುಖ್ಯಮಂತ್ರಿಗಳಿಗೆ ಹಾಗೂ ಕಂದಾಯ ಸಚಿವರಿಗೆ ಗೌರವಾರ್ಪಣೆ

Feb 19, 2026 - 16:21
 0  408
ಶಾಸಕ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ  ನೇತೃತ್ವದಲ್ಲಿ, ಕೊಡಗು ಗೌಡ ಸಮಾಜದ  ವತಿಯಿಂದ  ಮುಖ್ಯಮಂತ್ರಿಗಳಿಗೆ ಹಾಗೂ ಕಂದಾಯ ಸಚಿವರಿಗೆ ಗೌರವಾರ್ಪಣೆ

ಬೆಂಗಳೂರು; ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು ಹಾಗೂ ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ ರವರ ಉಪಸ್ಥಿತಿಯಲ್ಲಿ, ಕೊಡಗು ಅರೆಭಾಷೆ ಗೌಡ ಸಮುದಾಯ ವತಿಯಿಂದ, ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರನ್ನು ಹಾಗೂ ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಅವರನ್ನು ಬೆಂಗಳೂರಿನಲ್ಲಿ ಸನ್ಮಾನಿಸಿ, ಗೌರವಾರ್ಪಣೆ ಮಾಡಲಾಯಿತು.

ಇತ್ತೀಚಿಗೆ ಬೆಂಗಳೂರಿನಲ್ಲಿ ಜರುಗಿದ ಅರೆಭಾಷೆ ಗೌಡ ಸಮುದಾಯದ ಸಮಾರಂಭದಲ್ಲಿ ನೀಡಿದ ಆಶ್ವಾಸನೆಯಂತೆ, ಮಾನ್ಯ ಮುಖ್ಯಮಂತ್ರಿಗಳು, ಅರೆಭಾಷೆ ಗೌಡ ಸಮುದಾಯದ ಸಂಸ್ಕೃತಿ, ಶೈಕ್ಷಣಿಕ ಮತ್ತು ಕ್ರೀಡಾ ಕೇಂದ್ರ ಸ್ಥಾಪನೆ ಉದ್ದೇಶಕ್ಕಾಗಿ, ಮಡಿಕೇರಿ ತಾಲೂಕು ಮದೆ ಗ್ರಾಮದ ಕಾಟಕೇರಿ ಬಳಿ, 6 ಎಕರೆ ಜಾಗ ಮಂಜೂರು ಮಾಡಲು ಸಚಿವ ಸಂಪುಟದಲ್ಲಿ ಅನುಮೋದನೆ ನೀಡಿರುವುದನ್ನು ಇಲ್ಲಿ ಸ್ಮರಿಸಬಹುದು. ಅದಲ್ಲದೇ, ದಶಕಗಳಿಂದ ಕೊಡಗಿನ ಜನತೆಯನ್ನು ಕಾಡುತ್ತಿದ್ದ, ಅತ್ಯಂತ ಜಟಿಲವಾದ ಜಮ್ಮ ಬಾಣೆ ಸಮಸ್ಯೆಯ ಪರಿಹಾರಕ್ಕಾಗಿ, ಕರ್ನಾಟಕ ರಾಜ್ಯ ಕಂದಾಯ ಮಸೂದೆ 2025 ರ ತಿದ್ದುಪಡಿ ವಿದೇಯಕಕ್ಕೆ ಅನುಮೋದನೆ ನೀಡಿರುವುದಕ್ಕಾಗಿ ಮಾನ್ಯ ಮುಖ್ಯಮಂತ್ರಿಗಳನ್ನು ಕಾವೇರಿ ನಿವಾಸದಲ್ಲಿ ಸನ್ಮಾನಿಸಲಾಯಿತು.

ಇದೇ ಸಂದರ್ಭದಲ್ಲಿ ಕಂದಾಯ ಸಚಿವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿ ಗೌರವಾರ್ಪಣೆ ಸಲ್ಲಿಸಿ, ಸಭೆ ನಡೆಸಲಾಯಿತು. ಅರೆಭಾಷೆ ಗೌಡ ಸಮುದಾಯದ ಪ್ರಮುಖರಾದ ಕೊಲ್ಯದ ಗಿರೀಶ್, ಸೂರ್ತಲೆ ಸೋಮಣ್ಣ, ಪುಳಕಂಡ ಸಂದೀಪ್, ಕಾಳೇರಮ್ಮನ ನಂದ, ಪೊನ್ನಚ್ಚನ ಮಧು, ಕೊಂಬನ ಪ್ರವೀಣ್, ನಂಗಾರು ನಾಣಯ್ಯ, ಪಾಣ್ತಳೆ ಪಳಂಗಪ್ಪ, ಕೈಕೇರ ಮನೋಹರ್, ಆಮೆ ಸೀತಾರಾಮ್, ಪೇರಿಯನ ಘನಶ್ಯಾಮ್, ಮೂಲೆಮಜಲು ಅಮಿತ, ಚೊಕ್ಕಾಡಿ ಪ್ರೇಮ ರಾಘವಯ್ಯ, ಪ್ರಮುಖರು ಉಪಸ್ಥಿತರಿದ್ದರು.

What's Your Reaction?

Like Like 0
Dislike Dislike 0
Love Love 1
Funny Funny 0
Angry Angry 0
Sad Sad 0
Wow Wow 0