ಪದಕಲ್ಲು ಬಳಿ ಚಿರತೆ ಪ್ರತ್ಯಕ್ಷ: ಸ್ಥಳದಲ್ಲಿ ಸಿಸಿ ಕ್ಯಾಮೆರಾ ಅಳವಡಿಕೆ`

Aug 16, 2026 - 18:38
 0  125
ಪದಕಲ್ಲು ಬಳಿ ಚಿರತೆ ಪ್ರತ್ಯಕ್ಷ: ಸ್ಥಳದಲ್ಲಿ ಸಿಸಿ ಕ್ಯಾಮೆರಾ ಅಳವಡಿಕೆ`

ಮಡಿಕೇರಿ:ಚೆಟ್ಟಿಮಾನಿ ಸಮೀಪದ ಪದಕಲ್ಲು ಪ್ರದೇಶದಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿರುವ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚಿರತೆ ಸಂಚರಿಸಿರುವ ಸ್ಥಳದಲ್ಲಿ ಸಿಸಿ ಕ್ಯಾಮೆರಾವನ್ನು ಅಳವಡಿಸಲಾಗಿದೆ.

ಜೊತೆಗೆ ಅರಣ್ಯ ಇಲಾಖೆಯ RRT ತಂಡ ರಾತ್ರಿಯ ವೇಳೆಯೂ ಈ ವ್ಯಾಪ್ತಿಯಲ್ಲಿ ಗಸ್ತು ತಿರುಗಲಿದೆ ಎಂದು ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಸಾರ್ವಜನಿಕರು ಚಿರತೆ ಅಥವಾ ಅದರ ಚಲನವಲನ ಕಂಡುಬಂದಲ್ಲಿ ಆತಂಕಕ್ಕೆ ಒಳಗಾಗದೆ ತಕ್ಷಣವೇ ಅರಣ್ಯ ಇಲಾಖೆಯ ಕಂಟ್ರೋಲ್ ರೂಂಗೆ ಮಾಹಿತಿ ನೀಡುವಂತೆ ಕೋರಲಾಗಿದೆ. ಸಹಾಯವಾಣಿ ಸಂಖ್ಯೆಗಳು: 82771 24444, 82176 03466 / 99007 56130 --

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0