ಮಹಿಳೆ ಮೇಲೆ ದಾಳಿ ಮಾಡಿದ್ದ ಚಿರತೆ ಸೆರೆ
admincoorgdaily

ಸಿದ್ದಾಪುರ: ಮಾಲ್ದಾರೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಮೂಡುಗದ್ದೆ ಜಯರವರ ತೋಟದಲ್ಲಿ ನಿನ್ನೆ ದಿನ ಮಹಿಳೆಯ ಮೇಲೆ ದಾಳಿ ಮಾಡಿದ್ದ ಚಿರತೆಯನ್ನು ಅರಣ್ಯ ಇಲಾಖೆಯವರು ಇಂದು ಯಶಸ್ವಿ ಕಾರ್ಯಾಚರಣೆ ನಡೆಸಿ ಸೆರೆಹಿಡಿದಿದ್ದಾರೆ. ಚಿರತೆಯ ದಾಳಿಯಿಂದ ಕಳೆದ ಎರಡು ದಿನಗಳಿಂದ ಆತಂಕದಲ್ಲಿದ್ದ ಗ್ರಾಮಸ್ಥರು ಇದೀಗ ನಿಟ್ಟುಸಿರು ಬಿಟ್ಟಿದ್ದಾರೆ. ಅರಣ್ಯ ಇಲಾಖೆ ಅಧಿಕಾರಿಗಳ ತ್ವರಿತ ಕಾರ್ಯಾಚರಣೆಯಿಂದ ಚಿರತೆಯನ್ನು ಸೆರೆಹಿಡಿಯಲಾಗಿದೆ.